






ನಾವೂರು: ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ನಾವೂರು ಸಂಸ್ಥೆಯ 2009-2010ನೇ ಸಾಲಿನ ಬ್ಯಾಚ್ ವಿದ್ಯಾರ್ಥಿಗಳು ಆಯೋಜಿಸಲಿರುವ “ಗುರುವಂದನಾ ಮತ್ತು ಸ್ನೇಹ ಸಮ್ಮಿಲನ” ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ ಹಾಗೂ ಉದ್ಘಾಟನಾ ಸಮಾರಂಭವು ಶಾಲಾ ಆವರಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
16 ವರ್ಷಗಳ ಸುದೀರ್ಘ ಅವಧಿಯ ನಂತರ ಹಳೆಯ ವಿದ್ಯಾರ್ಥಿಗಳು ಒಗ್ಗೂಡಿ ತಮಗೆ ಅಕ್ಷರ ಕಲಿಸಿದ ಗುರುಗಳಿಗೆ ಗೌರವ ಸಲ್ಲಿಸುವ ಹಾಗೂ ಬಾಲ್ಯದ ನೆನಪುಗಳನ್ನು ಮೆಲಕು ಹಾಕುವ ಸದುದ್ದೇಶದಿಂದ ಈ ಸ್ನೇಹ ಸಮ್ಮಿಲನವನ್ನು ಹಮ್ಮಿಕೊಳ್ಳಲಾಗಿದೆ.


ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಎಸ್ಡಿಎಮ್ಸಿ – ಅಧ್ಯಕ್ಷ ಡಾ. ಪ್ರದೀಪ್ (SDMC),ಮುಖ್ಯ ಶಿಕ್ಷಕ ರೋಹಿಣಿ, ಉಮೇಶ್ ಪ್ರಭು – ಉಪಾಧ್ಯಕ್ಷರು ಗಣೇಶ್ ಗೌಡ – ನಿಕಟಪೂರ್ವ ಅಧ್ಯಕ್ಷರು, ಗ್ರಾಮ ಪಂಚಾಯತ್ಇವರೆಲ್ಲರೂ ಜಂಟಿಯಾಗಿ ಭಿತ್ತಿಪತ್ರವನ್ನು (ಪೋಸ್ಟರ್) ಅನಾವರಣಗೊಳಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಆರಂಭದಲ್ಲಿ ಪ್ರದೀಪ್ ಗೌಡ ನಗಾಜೆ ಅವರು ಪ್ರಸ್ತಾವಿಕ ಭಾಷಣದೊಂದಿಗೆ ಬಂದಂತಹ ಎಲ್ಲರನ್ನೂ ಆದರದಿಂದ ಸ್ವಾಗತಿಸಿದರು.
ಈ ಶುಭ ಸಮಾರಂಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಎಲ್ಲಾ ಗೌರವಾನ್ವಿತ ಶಿಕ್ಷಕ-ಶಿಕ್ಷಕಿಯರು, ಶಾಲಾ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಹಾಗೂ 2009-10ನೇ ಬ್ಯಾಚ್ನ ಹಳೆಯ ವಿದ್ಯಾರ್ಥಿ ಬಳಗವು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು









