ಕೇವಲ ಶೈಕ್ಷಣಿಕ ಜ್ಞಾನದಿಂದ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿಲ್ಲ: ಹರಿ ಎಚ್

0

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ (ಎಸ್.ಡಿ.ಎಂ. ಐ.ಟಿ.ಐ.), ಉಜಿರೆಯಲ್ಲಿ ಅ23 ಶುಕ್ರವಾರ ವಿದ್ಯಾರ್ಥಿನಿಯರಿಗಾಗಿ ‘ಜೀವನ ಕೌಶಲ್ಯ’ ವಿಶೇಷ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಎಂ. ಆರ್. ಪೂಂಜಾ ಐ.ಟಿ.ಐ., ಮುಲ್ಕಿಯ ನಿವೃತ್ತ ಪ್ರಾಂಶುಪಾಲರಾದ ಶ್ರೀ ಹರಿ ಎಚ್. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿನಿಯರಿಗೆ ಜೀವನ ಕೌಶಲ್ಯದ ಮಹತ್ವದ ಕುರಿತು ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ, ಶಿಸ್ತು, ಸಮಯಪಾಲನೆ, ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ, ಉತ್ತಮ ಸಂವಹನ ಕೌಶಲ್ಯ, ಸಮಸ್ಯೆಗಳನ್ನು ಎದುರಿಸುವ ಸಾಮರ್ಥ್ಯ ಹಾಗೂ ಗುರಿ ಸಾಧನೆಯ ಕುರಿತು ಅವರು ಪ್ರೇರಣಾದಾಯಕ ವಿಚಾರಗಳನ್ನು ಹಂಚಿಕೊಂಡರು. ಕೇವಲ ಶೈಕ್ಷಣಿಕ ಜ್ಞಾನದಿಂದ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿಲ್ಲ; ಅದರೊಂದಿಗೆ ಉತ್ತಮ ವ್ಯಕ್ತಿತ್ವ, ಮಾನವೀಯ ಮೌಲ್ಯಗಳು ಮತ್ತು ಜೀವನ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.

ವಿದ್ಯಾರ್ಥಿನಿಯರು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು, ಸವಾಲುಗಳನ್ನು ಧೈರ್ಯದಿಂದ ಎದುರಿಸಿ, ಸ್ವಾವಲಂಬಿ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಜೊತೆಗೆ ಸಿಕ್ಕಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಕಷ್ಟವಾದರೂ ಇಷ್ಟ ಪಟ್ಟು ವಿದ್ಯಾಭ್ಯಾಸ ಮಾಡಿ ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿನಿಯರ ಸಂಘದ ಉದ್ಘಾಟನೆ ಮಾಡಿದರು.

ಈ ಕಾರ್ಯಕ್ರಮವು ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ, ಜವಾಬ್ದಾರಿಯುತ ಮನೋಭಾವ ಹಾಗೂ ಜೀವನದಲ್ಲಿ ಯಶಸ್ಸು ಸಾಧಿಸುವ ಪ್ರೇರಣೆಯನ್ನು ಮೂಡಿಸಿತು. ಪೂಜ್ಯರ ಪಟ್ಟಾಭಿಷೇಕ ವರ್ಧಂತ್ಯುತ್ಸವ ಪ್ರಯುಕ್ತ ಬೆಳಾಲು ವೃತ್ತದಿಂದ ಮಂಜುಶ್ರೀ ಕಟ್ಟಡ ಸುತ್ತ-ಮುತ್ತಲಿನ ತನಕ ಸ್ವಚ್ಚತೆ ಮಾಡಿ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಚಾರ್ಯ ವಿ. ಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿಗಳು ಭಾಗವಹಿಸಿ ಸಹಕಾರ ನೀಡಿದರು.

LEAVE A REPLY

Please enter your comment!
Please enter your name here