






ಬಂಗಾಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಇಂದಬೆಟ್ಟುನಲ್ಲಿ ಸ್ಥಾಪನೆಯಾಗಲಿರುವ ಮಂಗಳೂರು ರಿಫೈನರಿ ಆಂಡ್ ಪೆಟ್ರೋ ಕೆಮಿಕಲ್ಸ್ (MRPL) ನ ನೂತನ ಪೆಟ್ರೋಲ್ ಪಂಪ್‌ನ ಶಿಲಾನ್ಯಾಸ ಕಾರ್ಯಕ್ರಮವು ಅ.25ರಂದು ಇಂದಬೆಟ್ಟುನಲ್ಲಿ ಅತ್ಯಂತ ಸಂಭ್ರಮದಿಂದ ನಡೆಯಿತು.

ಶಿಲಾನ್ಯಾಸವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಗಾಡಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಸಹಕಾರ, DCC ಬ್ಯಾಂಕ್ ಪ್ರತಿನಿಧಿ ಸುದರ್ಶನ್ ಅವರು ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ಹರೀಶ್ ಪೂಂಜಾ ಮಾತನಾಡಿ, ಪ್ರತಿಯೊಬ್ಬರ ಮನೆಯಲ್ಲಿ ಬೈಕ್ ಕಾರು ಇದೆ ಇದು ಉತ್ತಮ ಯೋಜನೆ, ಸಹಕಾರಿ ಸಂಘಗಳು ಗ್ರಾಮೀಣ ಭಾಗದ ಅಭಿವೃದ್ಧಿಗೆ ಬೆನ್ನೆಲುಬಾಗಿ ನಿಂತಿವೆ. ಬಂಗಾಡಿ ಸಹಕಾರಿ ಸಂಘ ಇಂತಹ ವಾಣಿಜ್ಯ ಮಳಿಗೆಗಳನ್ನು ಪ್ರಾರಂಭಿಸುವ ಮೂಲಕ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುತ್ತಿರುವುದು ಶ್ಲಾಘನೀಯ ಎಂದರು.ಕಾರ್ಯಕ್ರಮದಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲ್ಯಾನ್ ಸ್ವಾಗತಿಸಿದರು.
ಉಪಾಧ್ಯಕ್ಷ ಆನಂದ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್, ನಿರ್ದೇಶಕರಾದ ಕೆ.ಪುಷ್ಪಲತಾ, ಕೆ.ವಸಂತ ಗೌಡ, ರಮೇಶ್ ಕೆಂಗಾಜೆ, ರಘುನಾಥ, ಸತೀಶ್ ನಾಯ್ಕ, ಶೀನಪ್ಪ ಗೌಡ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್, ವೇದಾವತಿ, ಸಿಬ್ಬಂದಿ ವರ್ಗದವರು ಹಾಗೂ ನೂರಾರು ಗ್ರಾಹಕರು, ಸ್ಥಳೀಯರು ಉಪಸ್ಥಿತರಿದ್ದರು.
ಕಾರ್ಯಕ್ರವನ್ನು ಸಿಬ್ಬಂದಿ ರಮಾನಂದ್ ನಿರೂಪಿಸಿ, ನಿರ್ದೇಶಕ ವಿನಯಚಂದ್ರ ವಂದಿಸಿದರು,









