ಪರಿಶಿಷ್ಟ ಜಾತಿಯ ಯುವತಿಗೆ ಲೈಂಗಿಕ ಕಿರುಕುಳ ಆರೋಪ: ಸಯ್ಯದ್ ಮಹಮ್ಮದ್ ಮುಸ್ತಾಕ್ ಬಂಧನ

0

ಬೆಳ್ತಂಗಡಿ: ಪರಿಶಿಷ್ಟ ಜಾತಿಯ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವೇಣೂರು ಠಾಣಾ ಪೊಲೀಸರು ಸೈಯ್ಯದ್ ಮಹಮ್ಮದ್ ಮುಸ್ತಾಕ್ ಎಂಬಾತನನ್ನು ಬಂಧಿಸಿದ್ದಾರೆ.

ಪೊಲೀಸ್ ಪ್ರಕಟಣೆ:ಪರಿಶಿಷ್ಟ ಜಾತಿಗೆ ಸೇರಿದ ಯುವತಿ ಅ. 24 ರಂದು ಮಧ್ಯಾಹ್ನ ವೇಣೂರು ಠಾಣಾ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾಗ ಅಲ್ಲಿಗೆ ದ್ವಿಚಕ್ರ ವಾಹನದಲ್ಲಿ ಬಂದ ಬೆಳ್ತಂಗಡಿ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಎಂಬಾತ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡುತ್ತಾ ಹಣದ ಆಮಿಷವೊಡ್ಡಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 73/2026, ಕಲಂ: 75(1)(ii), 75(1)(iv), 79 ಬಿ.ಎನ್.‌ಎಸ್‌ 2023 ಮತ್ತು ಕಲಂ: 3(1)(r), 3(1)(w)(ii)̧ 3(2)(va) The SC & ST (Prevention of Atrocities) Amendment) Act 2015ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಸದ್ರಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದುಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here