






ಶಿಬರಾಜೆ ಪಾದೆ: ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಟ್ರಸ್ಟ್ (ರಿ.) ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆಯು ಅ.19ರಂದು ಮಂಡಳಿಯ ಸರ್ವ ಸದಸ್ಯರ ಸಮ್ಮುಖದಲ್ಲಿ ನಡೆಯಿತು.


ಅಧ್ಯಕ್ಷರಾಗಿ ಹರೀಶ್ ಕುಮಾರ್ ನೆಕ್ಕಾರಜೆ, ಉಪಾಧ್ಯಕ್ಷರಾಗಿ ವಿಶ್ವನಾಥ್ ಗೌಡ ಮರುವೆಲ್, ಕಾರ್ಯದರ್ಶಿಯಾಗಿ ಉಮೇಶ್ ನೀರಗಂಡಿ, ಜತೆ ಕಾರ್ಯದರ್ಶಿಯಾಗಿ ನಾರಾಯಣ ಗೌಡ ಬಟ್ಯಾಲ್ ಹಾಗೂ ಕೋಶಾಧಿಕಾರಿಯಾಗಿ ಪ್ರವೀಣ್ ಗೌಡ ಬಟ್ಯಾಲ್ ಆಯ್ಕೆಯಾದರು.
ನೂತನ ಪದಾಧಿಕಾರಿಗಳು ಮಂಡಳಿಯ ಧಾರ್ಮಿಕ, ಭಜನಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಇನ್ನಷ್ಟು ವಿಸ್ತರಿಸಿ, ಸಂಘಟನೆಯ ಪ್ರಗತಿಗೆ ಶ್ರಮಿಸಲಿ ಎಂದು ಸದಸ್ಯರು ಆಶಯ ವ್ಯಕ್ತಪಡಿಸಿ ಶುಭ ಹಾರೈಸಿದರು.









