






ಅರಸಿನಮಕ್ಕಿ: ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ನವೆಂಬರ್ 2ರಂದು ನಡೆಯಲಿರುವ ಬೃಹತ್ ಹಕ್ಕೊತ್ತಾಯ ಸಮಾವೇಶದ ಕರಪತ್ರ ಬಿಡುಗಡೆ ಕಾರ್ಯಕ್ರಮ ಅ.25ರಂದು ಸಂಜೆ ಅರಸಿನಮಕ್ಕಿಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.ಮಾಜಿ ತಾಲೂಕು ಪಂಚಾಯತ್ ಸದಸ್ಯ ವಾಮನ ತಾಮನ್ಕರ್ ಕರಪತ್ರ ಬಿಡುಗಡೆಗೊಳಿಸಿ, ಹಕ್ಕೊತ್ತಾಯ ಸಮಾವೇಶ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಮಾತನಾಡಿ, ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುವುದರೊಂದಿಗೆ ಹಕ್ಕೊತ್ತಾಯ ಸಮಾವೇಶಕ್ಕೂ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.


ವೇದಿಕೆಯಲ್ಲಿ ಹಕ್ಕೊತ್ತಾಯ ಸಮಿತಿಯ ಅಧ್ಯಕ್ಷ ರಾಘವೇಂದ್ರ ನಾಯಕ್, ಕಾರ್ಯದರ್ಶಿ ಧರ್ಮರಾಜ್ ಗೌಡ ಅಡ್ಕಾಡಿ, ಸಂಚಾಲಕ ಸುಂದರ ಎಂ.ಕೆ., ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಸಾಲಿಯಾನ್, ಸತೀಶ್ ಶೆಟ್ಟಿ ಗುತ್ತು ಹಾಗೂ ಕರುಣಾಕರ ಶಿಶಿಲ ಉಪಸ್ಥಿತರಿದ್ದರು.
ಸಮಿತಿಯ ಎಲ್ಲ ಸಂಚಾಲಕರು ಹಾಗೂ ಊರಿನ ಪ್ರಮುಖರು ಸಭೆಯಲ್ಲಿ ಭಾಗವಹಿಸಿ, ನ.2ರಂದು ನಡೆಯುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಲು ಶ್ರಮಿಸುವುದಾಗಿ ತಿಳಿಸಿದರು. ಕರುಣಾಕರ ಶಿಶಿಲ ಕಾರ್ಯಕ್ರಮ ನಿರೂಪಿಸಿದರು.
ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಸಮಿತಿ ವತಿಯಿಂದ ಅಕ್ಟೋಬರ್ 26ರಂದು ಬೆಳ್ತಂಗಡಿ ಪಿನಾಕಿ ಸಭಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ.









