







ಉಜಿರೆ, ಅ. 28:* ಪುತ್ತೂರಿನ ಸುಧಾನ ಶಾಲೆಯಲ್ಲಿ ಅ. 28ರಂದು ನಡೆದ ಜಿಲ್ಲಾ ಮಟ್ಟದ ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ನಿನಾದ್ ಅನಂತ್, ತೇಜಸ್ ಕುಲಾಲ್ ಹಾಗೂ ಸಿದ್ಧಾಂತ್ ಭಾಗವಹಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಈ ಪೈಕಿ ನಿನಾದ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.ವಿದ್ಯಾರ್ಥಿಗಳು ನವೆಂಬರ್ 2ರಂದು ಮೈಸೂರಿನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಯಲ್ಲಿಯೂ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದರು.









