







ಧರ್ಮಸ್ಥಳ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ. ಬಾಬು ಶೆಟ್ಟಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ, ಧರ್ಮಾಧಿಕಾರಿ ಡಾ. ಶ್ರೀ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಕುಟುಂಬ ಸಮೇತ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ (ಎಸ್.ಡಿ.ಎಂ.) ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.


ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಶ್ರೀ ಬಿ. ಸೋಮಶೇಖರ ಶೆಟ್ಟಿ ಅವರು ಉಪಸ್ಥಿತರಿದ್ದರು.









