ಪಾಕಿಸ್ತಾನದಲ್ಲಿ ಪೊಲೀಸರ ಹತ್ಯೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪಾಕಿಸ್ತಾನದ ಕರಾಚಿಯಲ್ಲಿ ಪೊಲಿಯೋ ಕಾರ್ಯಕ್ರಮದ ವೇಳೆ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಬೈಕ್ ನಲ್ಲಿ ಬಂದ ಬಂದೂಕುಧಾರಿಯೊಬ್ಬ ಏಳು ಪೊಲೀಸ್ ಅಧಿಕಾರಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬುಧವಾರ ನಡೆದಿದೆ. ಮೃತ ಪೊಲೀಸ್ ಅಧಿಕಾರಿಗಳನ್ನು ಪೊಲಿಯೋ ಲಸಿಕೆ ಕಾರ್ಯಕ್ರಮದ ಭದ್ರತೆಗೆ ನಿಯೋಜಿಸಲಾಗಿತ್ತು. ಕರಾಚಿಯಲ್ಲಿ ನಡೆದ ದಾಳಿಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಲಿಜಾಝ್ ಅವರು ತಿಳಿಸಿದ್ದಾರೆ. ದಾಳಿಯ ಹಿನ್ನೆಲೆಯಲ್ಲಿ ಪೊಲೀಸ್ ಲಸಿಕೆ ಕಾರ್ಯಕ್ರಮವನ್ನು ರದ್ದುಗೊಳಿಸುವ ಯೋಚನೆ ಇಲ್ಲ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ಫೆರೋಜ್ ಶಾಹ್ ಅವರು ಹೇಳಿದ್ದಾರೆ. ಪೊಲಿಯೋ ಕಾರ್ಯಕ್ರಮಕ್ಕೆ ನಿಯೋಜಿಸಿದ್ದ ಪೊಲೀಸರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎಂದು ಪ್ರಾಂತಿಯ ಗೃಹ ಸಚಿವ ಸುಹೈಲ್ ಅನ್ವರ್ ಅವರು ಹೇಳಿದ್ದಾರೆ. ಇನ್ನು ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.