ಪೇಪರ್ ಲೀಕ್ ಕಿಂಗ್‌ಪಿನ್ ಅರೆಸ್ಟ್

ದ್ವಿತೀಯ ಪಿಯುಸಿ ಕೆಮಿಸ್ಟ್ರಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್‌ಪಿನ್ ಶಿವಕುಮಾರ ಸ್ವಾಮಿಯನ್ನು ಸಿಐಡಿ ಪೊಲೀಸರು ಸೋಮವಾರ ರಾತ್ರಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬನ್ನೇರುಘಟ್ಟ ರಸ್ತೆಯ ಗಾರೇ ಬಾವಿ ಪಾಳ್ಯ ಬಳಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಶಿವಕುಮಾರ ಸ್ವಾಮಿ ಅಡಗಿ ಇರುವುದನ್ನು ಖಚಿತ ಪಡಿಸಿಕೊಂಡು ದಾಳಿ ನಡೆಸಿದ ಪೊಲೀಸರು ಬಂಧಿಸಿದ್ದಾರೆ. ಸಿಐಡಿ ಡಿಜಿಪಿ ಕಿಶೋರ್ ಚಂದ್ರ ಅವರು ಮಂಗಳವಾರ ಮಧ್ಯಾಹ್ನ ಸುದ್ದಿಗೋಷ್ಟಿ ನಡೆಸಿ ಬಂಧನದ ಕುರಿತಾಗಿ ಮಾಹಿತಿ ನೀಡಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ತಲೆ ಮರೆಸಿಕೊಂಡಿದ್ದ ಈತ ಟೊಮ್ಯಾಟೊ ಎಂಬ ಕೋಡ್‌ವರ್ಡ್ ಇರಿಸಿಕೊಂಡಿದ್ದ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.