ಸರ್ಕಾರಕ್ಕೆ ಹಿನ್ನಡೆ

ಲೋಕಾಯುಕ್ತ ನೇಮಕ ವಿಚಾರದಲ್ಲಿ ಸರ್ಕಾರಕ್ಕೆ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವ ಸರ್ಕಾರದ ಪ್ರಸ್ತಾವನೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ೨೦೧೫ರ ಡಿಸೆಂಬರ್‌ನಲ್ಲಿ ನ್ಯಾ.ವೈ.ಭಾಸ್ಕರರಾವ್ ಅವರು ಲೋಕಾಯುಕ್ತ ಹುದ್ದೆಗೆ ರಾಜೀನಾಮೆ ನೀಡಿದ್ದರು. ನಂತರ ಕರ್ನಾಟಕ ಲೋಕಾಯುಕ್ತ ಹುದ್ದೆ ಖಾಲಿ ಇದೆ. ಸರ್ಕಾರ ಎಸ್.ಆರ್.ನಾಯಕ್ ಅವರ ಹೆಸರನ್ನು ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಿ, ಒಪ್ಪಿಗೆಗಾಗಿ ರಾಜ್ಯಪಾಲರಿಗೆ ಕಳುಹಿಸಿತ್ತು. ಆದರೆ, ಹೆಸರನ್ನು ತಿಸ್ಕರಿಸಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರು ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರು ಎಸ್.ಆರ್.ನಾಯಕ್ ಅವರ ನೇಮಕದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.