ಪೆರ್ಮುಡ ದೈವಸ್ಥಾನ: ಮೇ 10-11 ಪ್ರತಿಷ್ಠಾ ಬ್ರಹ್ಮಕಲಶೋತ್ಸವ

permuda pressmeet copyಪೆರ್ಮುಡ : ಐತಿಹಾಸಿಕ ಇತಿಹಾಸವುಳ್ಳ ಪೆರ್ಮುಡ ಪಂಡಿಜೆ ಕಲ್ಲಾಣಿ ಶ್ರೀ ಕೊಡಮಣಿತ್ತಾಯ, ಕಲ್ಕುಡ-ಕಲ್ಲುರ್ಟಿ ದೈವಸ್ಥಾನ ಮತ್ತು ನಾಗಸನ್ನಿಧಿ ಇದರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮೇ. ೧೦ರಿಂದ ಮೇ ೧೧ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಸಲಹೆಗಾರ ಪ್ರವೀಣ್‌ಚಂದ್ರ ಜೈನ್ ನಡಿಬೆಟ್ಟುಗುತ್ತು ಹೇಳಿದರು.
ಅವರು ಮೇ.೩ರಂದು ಪೆರ್ಮುಡ ಪಂಡಿಜೆ ಕಲ್ಲಾಣಿ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮೇ. ೧೦ರಂದು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಾಸ್ತುಪೂಜೆ ಜರಗಲಿದ್ದು, ಬಳಿಕ ರಾತ್ರಿ ಧಾರ್ಮಿಕ ಸಭೆ ನಡೆಯಲಿದೆ. ನಡಿಬೆಟ್ಟುಗುತ್ತುವಿನ ನೇಮಿರಾಜ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ವೇಣೂರು ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ವಿಜಯ ರಾಜ ಅಧಿಕಾರಿ ಮಾರಗುತ್ತು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ಯೋಜನಾಧಿಕಾರಿ ರೂಪಾ ಜಿ. ಜೈನ್, ಅಳದಂಗಡಿ ಕ್ಷೇತ್ರದ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ, ನಾರಾವಿ ಕ್ಷೇತ್ರದ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಪ್ರ. ಕಾರ್ಯದರ್ಶಿ ಕೆ. ವಿಜಯ ಗೌಡ, ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷೆ ತೇಜಾಕ್ಷಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿ ದ್ದಾರೆ. ಬಳಿಕ ವೇಣೂರು ಫಲ್ಗುಣಿ ಕಲಾ ತಂಡದ ಸದಸ್ಯರಿಂದ ‘ಪುರ‍್ಸಗ್ ಪುರ‍್ಸೊತ್ತಿಜ್ಜಿ ಎಂಬ ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು.
ಮೇ. ೧೧ರಂದು ಗುತ್ತುಗಳಿಂದ ಭಂಡಾರ ಬಂದು ಕೊಡಮಣಿತ್ತಾಯ ದೈವದ ದರ್ಶನ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ. ರಾತ್ರಿ ನಡೆಯಲಿರುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ಅರಸರಾದ ಡಾ| ಪದ್ಮಪ್ರಸಾದ ಅಜಿಲರು ವಹಿಸಲಿದ್ದು, ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮದರ್ಶಿ ಭೀಮೇಶ್ವರ ಜೋಷಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಬೆಳ್ತಂಗಡಿ ಶಾಸಕ ಕೆ. ವಸಂತ ಬಂಗೇರ, ಉದ್ಯಮಿ ಶ್ರೀಪತಿ ಭಟ್, ಬಿಜೆಪಿಯ ಜಿಲ್ಲಾಧ್ಯಕ್ಷ ಪ್ರತಾಪಸಿಂಹ ನಾಯಕ್, ಹೈಕೋರ್ಟ್ ನ್ಯಾಯವಾದಿ ಹರೀಶ್ ಪೂಂಜ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ನಮ್ಮ ಟಿವಿ ಬಲೆ ತೆಲಿಪಾಲೆ ಖ್ಯಾತಿಯ ಉಮೇಶ್ ಮಿಜಾರು ತಂಡದವರಿಂದ ‘ತೆಲಿಕೆದ ಗೊಂಚಿಲ್; ಎಂಬ ಹಾಸ್ಯೋತ್ಸವ ಜರಗಲಿದೆ. ರಾತ್ರಿ ೧೨ ಗಂಟೆಯಿಂದ ದೈವಗಳ ನೇಮೋತ್ಸವವು ಜರಗಲಿದೆ ಎಂದು ಅವರು ತಿಳಿಸಿದರು.
ಗೋಷ್ಠಿಯಲ್ಲಿ ಗೌರವಾಧ್ಯಕ್ಷ ಪಿ. ಲಕ್ಷ್ಮಣ ಹೆಬ್ಬಾರ್, ಉಪಾಧ್ಯಕ್ಷರಾದ ಗೋಪಾಲ ಪೂಜಾರಿ ಪೆರ್ಮುಡ, ಪ್ರಭಾಕರ ಪೆರ್ಮುಡ, ಕೋಶಾಧಿಕಾರಿ ಪಿ. ಪ್ರಶಾಂತ್ ಹೆಬ್ಬಾರ್ ಪಂಡಿಜೆ, ಸ್ವಾಗತ ಸಮಿತಿ ಸಂಚಾಲಕ ಪಿ. ಪ್ರಸನ್ನ ಹೆಬ್ಬಾರ್ ಪಂಡಿಜೆ ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ರತ್ನಾಕರ ಅಂಕರ್ಜಾಲು ಸ್ವಾಗತಿಸಿ ಅಧ್ಯಕ್ಷ ಅಶೋಕ್ ಪಾಣೂರು ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.