ಅಲ್ಪಸಂಖ್ಯಾತ, ಹಿಂದುಳಿದ ವರ್ಗದ ನಿಗಮ ಸಾಲ ಸೌಲಭ್ಯ

Advt_NewsUnder_1
Advt_NewsUnder_1
Advt_NewsUnder_1

  ಬೆಳ್ತಂಗಡಿ : ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ಡಾ. ಬಿ.ಆರ್ ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಅಬಿವೃದ್ಧಿ ನಿಗಮ, ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ದಿ ನಿಗಮದಿಂದ ನೀಡಲಾಗುವ ಗಂಗಾಕಲ್ಯಾಣ ಹಾಗೂ ಇತರ ಸಾಲ ಸವಲತ್ತುಗಳಿಗೆ ಅರ್ಜಿ ಆಹ್ವಾನಿಸಿದ್ದಾರೆ.
ಅರ್ಹ ಆಸಕ್ತ ಫಲಾನುಭವಿಗಳು ಅಗತ್ಯವಿರುವ ದಾಖಲೆ ಸಮೇತ ಸಂಬಂಧಪಟ್ಟ ಕಛೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಶಾಸಕರ ಶಿಫಾರಸು ಪತ್ರದ ಅಗತ್ಯ ಇರುವುದಿಲ್ಲ. ನಿಗಮದವರು ಅರ್ಹ ಫಲಾನುಭವಿಗಳಿಂದ ಅರ್ಜಿ ಸ್ವೀಕರಿಸಿದ ನಂತರ ಶಾಸಕರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ವಿವರಗಳನ್ನು ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ಸಮಿತಿ, ಮಂಗಳೂರು (0824-24020114), ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (0824-2456544 ), ಅಲ್ಪ ಸಂಖ್ಯಾತರ ಅಭಿವೃದ್ದಿ ನಿಗಮ ಮಂಗಳೂರು (0824-2450044 ) ಇಲ್ಲಿಂದ ಪಡೆಯಬಹುದು ಎಂದು ಶಾಸಕ ಕೆ .ವಸಂತ ಬಂಗೇರ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.