ಬೆಂಗಳೂರು-ಹುಬ್ಬಳ್ಳಿ, ಬೆಂಗಳೂರು-ಮೈಸೂರು ನಡುವೆ ಸೆಮಿ ಹೈಸ್ಪೀಡ್ ರೈಲು ಆರಂಭಿಸಲು ಚಿಂತನೆ ನಡೆಸುತ್ತಿರುವುದಾಗಿ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ತಿಳಿಸಿದ್ದಾರೆ. ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ಮರುನಾಮಕರಣ ಕಾರ್ಯಕ್ರಮದಲ್ಲಿ ಮಾತನಾಡಿದ ಸುರೇಶ್, ಕರ್ನಾಟಕದ ಸಮಗ್ರ ರೈಲ್ವೆ ಯೋಜನೆಗಳ ಅನುಷ್ಠಾನ ಮತ್ತು ಹೊಸ ಯೋಜನೆಗಳ ಜಾರಿ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರದೊಂದಿಗೆ ಸೇರಿ ಹೊಸ ಕಂಪನಿಯನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.