ದೆಹಲಿ ಉಪ ಚುನಾವಣೆ: ಬಿಜೆಪಿಗೆ ನಿರಾಸೆ

ದೆಹಲಿ ಮಹಾನಗರ ಪಾಲಿಕೆಯ ೧೩ ಸ್ಥಾನಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಹೊರಬಿದ್ದಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಭರ್ಜರಿ ಗೆಲವು ಸಾಧಿಸಿದ್ದು, ಬಿಜೆಪಿಗೆ ತೀವ್ರ ನಿರಾಸೆಯಾಗಿದೆ. ಕಳೆದ ಮೇ ೧೫ರಂದು ದೆಹಲಿ ಮಹಾನಗರ ಪಾಲಿಕೆಗೆ ನಡೆದ ಉಪ ಚುನಾವಣೆಯ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಆಮ್ ಆದ್ಮಿ ಪಕ್ಷ ಐದು ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ ಕೇವಲ ೩ ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಇನ್ನುಳಿದಂತೆ ಓರ್ವ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.