ಮತ್ತೆ ಎಸ್.ಆರ್.ನಾಯಕ್ ಹೆಸರು ಶಿಫಾರಸ್ಸು

Advt_NewsUnder_1
Advt_NewsUnder_1
Advt_NewsUnder_1

ನೂತನ ಲೋಕಾಯುಕ್ತರ ಆಯ್ಕೆಗಾಗಿ ರಾಜ್ಯ ಸರಕಾರ ಮತ್ತೆ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಹೆಸರನ್ನು ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಹೇಳಿದ್ದಾರೆ. ಈ ಹಿಂದೆ ಲೋಕಾಯುಕ್ತರ ನೇಮಕಾತಿ ವಿಚಾರವಾಗಿ ರಾಜ್ಯ ಸರಕಾರ, ವಜೂಭಾಯಿ ವಾಲಾ ಅವರಿಗೆ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರನ್ನು ಆಯ್ಕೆಮಾಡುವಂತೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ರಾಜ್ಯಪಾಲರು ರಾಜ್ಯ ಸರಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ತಿರಸ್ಕರಿಸಿ, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಪರಿಶೀಲನೆ ನಡೆಸಲಾಗುವುದು ಎಂದು ಸರಕಾರಕ್ಕೆ ಚಾಟಿ ಬೀಸಿದ್ದರು. ರಾಜ್ಯಪಾಲರು ರಾಜ್ಯ ಸರಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದರು ಸಹ, ಮತ್ತೆ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರ ಹೆಸರನೇ ಶಿಫಾರಸ್ಸು ಮಾಡಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.