ಬೆಂಗಳೂರುನಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆರ್ಯುವೇದ ಕಾಲೇಜು ಮತ್ತು ಆಸ್ಪತ್ರೆ ಉದ್ಘಾಟನೆ

SDM Hospital udgatane copy  ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆರ್ಯುವೇದ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವನ್ನು ಮೇ.೧೮ ರಂದು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಉದ್ಘಾಟಿಸಿದರು. ಆರ್ಯುವೇದ ಕಾಲೇಜಿನ ಉದ್ಘಾಟನೆಯನ್ನು ಆಯುಷ್ ಇಲಾಖೆಯ ಕೇಂದ್ರ ಸಚಿವರಾದ ಶ್ರೀಪಾದ ಯಸ್ಸೋ ನ್ಯಾಕ್, ವಿದ್ಯಾರ್ಥಿ ನಿಲಯವನ್ನು ಆರೋಗ್ಯ ಸಚಿವರಾದ ಯು.ಟಿ ಖಾದರ್ ಹಾಗೂ ಬೆಂಗಳೂರು ಗ್ರಾಮಂತರ ಸಂಸದರಾದ ಡಿ.ಕೆ ಸುರೇಶ್, ಆರ್ಯುವೇದ ಫಾರ್ಮಸಿಯನ್ನು ಯಶವಂತಪುರ ಶಾಸಕರಾದ ಎಸ್.ಟಿ ಸೋಮಶೇಖರ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾನೂನು ಸಚಿವರಾದ ಟಿ.ಬಿ ಜಯಚಂದ್ರ, ಇಂಧನ ಸಚಿವರಾದ ಡಿ.ಕೆ ಶಿವಕುಮಾರ್, ಯುವಜನ ಸೇವಾ ಮತ್ತು ಕ್ರೀಡಾ ಸಚಿವರಾದ ಕೆ. ಅಭಯಚಂದ್ರ ಜೈನ್, ಶ್ರೀಮತಿ ಹೇಮಾವತಿ ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹಷೇಂದ್ರ ಕುಮಾರ್, ಡಾ. ಬಿ. ಯಶೋವರ್ಮ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.