ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

  ಉಪ್ಪಿನಂಗಡಿ : ಮೇ20ರಂದು ನೇತ್ರಾವತಿ ನದಿಯಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಅಂತರ ಮನೆ ನಿವಾಸಿ ಸುಂದರ ಗೌಡ (45) ಮೃತ ವ್ಯಕ್ತಿ. ಮೇ 19 ರಂದು ಉಪ್ಪಿನಂಗಡಿ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಹಿಂದುರಗದೇ ಇದ್ದಾಗ ಮನೆ ಮಂದಿ ಹುಡುಕಾಟದಲ್ಲಿ ನಿರತರಾಗಿದ್ದರು. ಶುಕ್ರವಾರ ಬೆಳಗ್ಗೆ ಮೊಗ್ರು ಗ್ರಾಮದ ಕೇಪುಳು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅವರ ಮೃತ ದೇಹ ಕಂಡು ಬಂದಿದೆ. ಮನೆಗೆ ತೆರಳುವ ದಾರಿ ಮಧ್ಯೆ ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದಾಗ ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ಅಂದಾಜಿಸಲಾಗಿದೆ. ಈ ಬಗ್ಗೆ ಮೃತರ ಪತ್ನಿ ಕುಸುಮಾ ಪೋಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.