ಗುರುವಾಯನಕೆರೆ ಹಲ್ಲೆ ಆರೋಪಿಗಳ ವಿರುದ್ಧ ದರೋಡೆ ಪ್ರಕರಣ ದಾಖಲು ಹಿಂದೂ ಸಂಘಟನೆಗಳ ಮುಖಂಡರಿಂದ ಮತ್ತೆ ಪ್ರತಿಭಟನೆ ಹಿನ್ನೆಲೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

1ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ನಡೆದ ಹಲ್ಲೆ ಪ್ರಕರಣವೊಂದರ ಆರೋಪಿಗಳ ವಿರುದ್ಧ ದರೋಡೆ ಕೇಸು ಹಾಕಿಲ್ಲ ಎಂದು ಆಪಾದಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಮತ್ತು ನಾಯಕರುಗಳು ಪ್ರತಿಭಟನೆ ನಡೆಸಿ ೨೪ ಗಂಟೆಯ ಗಡುವು ನೀಡಿದ ಬಳಿಕ ಮೇ. ೨೭ ರಂದು ಮತ್ತೆ ಠಾಣೆಯ ಮುಂದೆ ಪ್ರತಿಭಟನೆ ನಡೆಯಿತು. ಆ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದ ಪೊಲೀಸರು ಆರೋಪಿಗಳ ವಿರುದ್ಧ ದರೋಡೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮೇ ೨೭ ರಂದು ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಪ್ರತಾಪಸಿಂಹ ನಾಯಕ್, ವಕೀಲರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಂಜನ್ ಜಿ ಗೌಡ, ಧರ್ಮಾ ರಕ್ಷಾ ಪ್ರಮುಖ್ ಹರೀಶ್ ಪೂಂಜ, ಭಜರಂಗ ದಳ ಜಿಲ್ಲಾ ಸಂಚಾಲಕ ಭಾಸ್ಕರ ಧರ್ಮಸ್ಥಳ, ತಾ| ಅಧ್ಯಕ್ಷ ದಿನೇಶ್ ಮುಗುಳಿ, ಪ್ರಮುಖರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ, ನವೀನ್ ನೆರಿಯ, ಹರೀಶ್ ಮೂರ್ತಾಜೆ, ಭರತ್ ಇಂದಬೆಟ್ಟು, ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.