ವಿಹೆಚ್‌ಪಿ, ಬಜರಂಗದಳ ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿದೆ: ಹರೀಶ್ ಪೂಂಜ

bhajaranga sala copyಬೆಳ್ತಂಗಡಿ : ವಿಶ್ವಹಿಂದೂ ಪರಿಷತ್, ಬಜರಂಗದಳ ಸೇವಾ ಮನೋಭಾವವನ್ನು ಇಟ್ಟುಕೊಂಡು ಅಶಕ್ತರಿಗೆ ಸಹಾಯಹಸ್ತ ಚಾಚುವ ಕೆಲಸ ಮಾಡುತ್ತಿದೆ ಎಂದು ಹೈಕೋರ್ಟ್ ನ್ಯಾಯವಾದಿ ಹರೀಶ್ ಪೂಂಜ ಹೇಳಿದರು.
ಅವರು ಜೂ. 5 ರಂದು ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥಸ್ವಾಮಿ ಕಲಾಭವನದಲ್ಲಿ ವಿಶ್ವಹಿಂದೂ ಪರಿಷತ್, ಬಜರಂಗದಳ ಬೆಳ್ತಂಗಡಿ ನಗರ ವತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ ಮತ್ತು ಅಶಕ್ತ ಕುಟುಂಬಗಳಿಗೆ ಸಹಾಯ ಧನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದೇ ಸಂದರ್ಭ ಕರುಣಾಕರ ಅಭ್ಯಂಕರ್ ಮುಂಡಾಜೆ, ಪುನ್ಕುಡ ಅವರನ್ನು ಸನ್ಮಾನಿಸಲಾಯಿತು. ಅಶಕ್ತ ಕುಟುಂಬಗಳಿಗೆ ಧನ ಸಹಾಯ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.
ವಿಎಚ್‌ಪಿ ತಾ| ಕಾರ್ಯದರ್ಶಿ ನವೀನ್ ನೆರಿಯ ಕಾರ್ಯಕ್ರಮ ನಿರ್ವಹಿಸಿದರು. ಶಹನ್ ವಿ.ಸಿ ಪ್ರಸ್ತಾವಿಸಿ, ಸ್ವಾಗತಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.