HomePage_Banner_
HomePage_Banner_
HomePage_Banner_

ವೇಣೂರು: ವಿದ್ಯೋದಯ ಶಾಲಾ ಪ್ರಾರಂಭೋತ್ಸವ

Advt_NewsUnder_1

pವೇಣೂರು: ಇಲ್ಲಿಯ ವಿದ್ಯೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2016-17ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಮೇ 30ರಂದು ನಡೆಯಿತು. ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ವಿ. ಶೆಟ್ಟಿ ಉದ್ಘಾಟಿಸಿ ಮಕ್ಕಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ನೇಮಯ್ಯ ಕುಲಾಲ್ ವಹಿಸಿ ಮಕ್ಕಳಿಗೆ ಹಿತವಚನವನ್ನಿತ್ತರು. ಶಾಲಾ ಮುಖ್ಯೋಪಾಧ್ಯಾಯಿನಿ ಶೀಲಾ ಎಸ್. ಹೆಗ್ಡೆ ಸ್ವಾಗತಿಸಿ, ಸಹಶಿಕ್ಷಕಿ ಶಶಿಪ್ರಭ ಡಿ.ಕೆ. ಧನ್ನವಾದವಿತ್ತರು. ಶಾಲಾ ಶಿಕ್ಷಕ ವೃಂದ ಹಾಗೂ ಎಸ್‌ಡಿಎಂಸಿ ಪದಾಧಿಕಾರಿಗಳು ಸಹಕರಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.