ಉದ್ಯೋಗ ಖಾತರಿ ಯೋಜನೆ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆ

bandu GP samajika parisodane copyಬಂದಾರು : ವೈಯಕ್ತಿಕ ಕಾಮಗಾರಿಯ ಮೂಲಕ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಮಾಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮೂಲಕ ಸಿಗುವ ಅನುದಾನವು ಸಹಕಾರಿಯಾಗಲಿದೆ. ಉದ್ಯೋಗ ಖಾತರಿ ಯೋಜನೆ ಮುಖಾಂತರ ಹೆಚ್ಚು ಕೃಷಿ ಕಾರ್ಯಗಳನ್ನು ಹಾಗೂ ಸಾರ್ವಜನಿಕ ಕಾಮಗಾರಿಗಳನ್ನು ಮಾಡುವ ಮೂಲಕ ಸರಕಾರದ ಯೋಜನೆಯನ್ನು ಗ್ರಾಮೀಣ ಜನರು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಲಕ್ಷ್ಮಣ ಶೆಟ್ಟಿ ಅವರು ಅಭಿಪ್ರಾಯಪಟ್ಟರು.
ಅವರು ಬಂದಾರು ಗ್ರಾಮ ಪಂಚಾಯತಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ 2016-17 ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆಯ ಬಗ್ಗೆ ವಿಶೇಷ ಗ್ರಾಮ ಸಭೆಯ ಅಧ್ಯಕ್ಷತೆ ಹಾಗೂ ಮಾರ್ಗದರ್ಶಕ ಅಧಿಕಾರಿಯಾಗಿ ಭಾಗವಹಿಸಿದರು. ವೇದಿಕೆಯಲ್ಲಿ ಗೌರವ ಉಪಸ್ಥಿತರಿದ್ದ ಗ್ರಾ.ಪಂ.ಅಧ್ಯಕ್ಷರಾದ ಉದಯ ಕುಮಾರ್.ಬಿ.ಕೆ ಮಾತನಾಡುತ್ತ ಉದ್ಯೋಗ ಖಾತರಿ ಯೋಜನೆಯ ಮೂಲಕ ಗ್ರಾಮದಲ್ಲಿ ಕೃಷಿ ಅಭಿವೃದ್ಧಿ, ಇಂಗುಗುಂಡಿ, ರಸ್ತೆ ಕಾಂಕ್ರಿಟೀಕರಣದ ಮೂಲಕ ಗ್ರಾಮವನ್ನು ಅಭಿವೃದ್ಧಿ ಪಡಿಸಲು ಗ್ರಾಮಸ್ಥರು ಸಹಕರಿಸಬೇಕೆಂದು ವಿನಂತಿಸಿಕೊಂಡರು. ಸಭೆಯಲ್ಲಿ ತಾ.ಪಂ.ಸದಸ್ಯರಾದ ಕೃಷ್ಣಯ್ಯ ಆಚಾರ‍್ಯ, ಗ್ರಾ.ಪಂ.ಉಪಾಧ್ಯಕ್ಷರಾದ ಶ್ರೀಮತಿ ಚಂದ್ರಾವತಿ.ಕೆ.ವೈ ನರೇಗ ಯೋಜನೆಯ ತಾಲೂಕು ಸಂಯೋಜಕಿ ಶ್ರೀಮತಿ ಪವಿತ್ರ ಶೆಟ್ಟಿ, ನರೇಗ ಅಭಿಯಂತರರು ಶರಣ್ ರೈ, ಪಂಚಾ ಯತ್ ಅಭಿವೃದ್ಧಿ ಅಧಿಕಾರಿಯಾದ ಶ್ರೀಮತಿ ಶಾರದಾ.ಪಿ.ಎ ಹಾಗೂ ಸರ್ವ ಸದಸ್ಯರು, ಪಂ.ಸಿಬ್ಬಂಧಿಗಳು, ಬಂದಾರು & ಮೊಗ್ರು ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಂಬೇಡ್ಕರ್ ವಸತಿ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರವನ್ನು ವಿತರಿಸಲಾಯಿತು. ಗ್ರಾ.ಪಂ.ಸಿಬ್ಬಂದಿ ದಿನಕರ ವಂದಿಸಿದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.