ದೇವೇಗೌಡರದ್ದು ಹತಾಶೆಯ ನುಡಿ:ಯಡಿಯೂರಪ್ಪ

ವಿಧಾನ ಪರಿಷತ್ ಹಾಗೂ ರಾಜ್ಯ ಸಭಾ ಚುನಾವಣೆಯಲ್ಲಿನ ಸೋಲಿನ ಬೇಸರದಿಂದಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಒಪ್ಪಂದ ಮಾಡಿಕೊಂಡಿದ್ದವು ಎಂಬ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡರ ಆರೋಪಗಳಿಗೆ ಉತ್ತರ ನೀಡಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು, ಅವರ ಆರೋಪಗಳಿಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. ಬೆಂಗಳೂರಿನ ಪಕ್ಷದ ಕಛೇರಿಯಲ್ಲಿಂದು ಮಾತನಾಡಿದ ಅವರು, ನಾವು ಕಾಂಗ್ರೆಸ್ ಜೊತೆ ಒಪ್ಪಂದ ಮಾಡಿಕೊಂಡು, ಜೆಡಿಎಸ್ ಪಕ್ಷವನ್ನು ಮುಗಿಸಲು ಯತ್ನಿಸಿದ್ದೇವೆ ಎಂಬ ದೇವೇಗೌಡರ ಆರೋಪ ನಿರಾಧಾರ, ಯಾರೊಂದಿಗೂ ನಾವು ಒಪ್ಪಂದ ಮಾಡಿಕೊಂಡಿರಲಿಲ್ಲ ಎಂದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.