ಮಾನಭಂಗ, ಹಲ್ಲೆ ಪ್ರಕರಣದ ಆರೋಪಿಗಳಿಗೆ ಜಾಮೀನು

Advt_NewsUnder_1
Advt_NewsUnder_1

ಬೆಳ್ತಂಗಡಿ : ಮಾನಭಂಗ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ಬಂಧನ ಬೀತಿ ಎದುರಿಸುತ್ತಿದ್ದ ಐವರು ಆರೋಪಿಗಳಿಗೆ ಮಂಗಳೂರು ಪ್ರಧಾನ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.
ಉರುವಾಲು ಹಾಗೂ ಕುಪ್ಪೆಟ್ಟಿ ನಿವಾಸಿಗಳಾದ ಮುಹಮ್ಮದ್ ರಫೀಕ್, ನವಾಝ್, ಮುಹಮ್ಮದ್ ರಫೀಕ್, ಯಾಸೀರ್ ಕೆ.ಇಬ್ರಾಹಿಂ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರನ ದಾಖಲಾಗಿತ್ತು. ಉರುವಾಲು ನಿವಾಸಿ ಝೆಹಾರ ಎಂಬವರು ನೆಕ್ಕಿಲು ಎಂಬಲ್ಲಿರುವ ತನ್ನ ಸಹೋದರ ಹಂಝರವರ ಮನೆಗೆ ಹೋಗಿದ್ದ ವೇಳೆ ಅಲ್ಲಿಗೆ ಬಂದ ಆರೋಪಿಗಳು ಅಲ್ಲಿದ್ದ ಅಟೋ ಚಾಲಕ ಹ್ಯಾರೀಸ್ ಹಾಗೂ ಝೆಹಾರರ ತಂಗಿಯ ಮೇಲೆ ಮಾನಬಂಗಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಘಟನೆಗೆ ಹ್ಯಾರೀಸ್ ಹಾಗೂ ಮುಹಮ್ಮದ್ ರಫೀಕ್‌ರವರ ನಡುವಿನ ಹಳೆ ದ್ವೇಷವೇ ಕರನ ಎಂದು ಝೆಹಾರರವರು ಉಪ್ಪಿನಂಗಡಿ ಪೊಲಿಸರಿಗೆ ದೂರು ನೀಡಿದ್ದರುಜ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲಿಸರು ಆರೋಪಿಗಳ ಮೆಲೆ 143, 147, 448, 323, 504, 506, 354, 149 ಐಪಿಸಿ ಸೆಕ್ಷನ್ ಪ್ರಕಾರ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳು ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು ನಿರೀಕ್ಷಣಾ ಜಾಮೀನು ಕೋರಿ ಮಂಗಳೂರಿನ ಪ್ರಧಾನ ಜಿಲ್ಲಾ ನ್ಯಾಯಾಧಿಶರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡಿದೆ. ಆರೋಪಿಗಳ ಪರವಾಗಿ ನ್ಯಾಯವಾದಿಗಳಾದ ಅನಿಲ್ ಕುಮರ್ ಉಪ್ಪಿನಂಗಡಿ ಹಾಗೂ ಸಂದೇಶ್ ನಟ್ಟಿಬೈಲು ವಾದಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.