HomePage_Banner_
HomePage_Banner_
HomePage_Banner_

ವೇಣೂರು: ಕೃಷಿ ಅಭಿಯಾನ ಕಾರ್ಯಕ್ರಮ ಉದ್ಘಾಟನೆ ಕೃಷಿ ಉತ್ಪನ್ನಗಳ ಹತಾಶ ಸ್ಥಿತಿಯ ಮಾರಾಟ ಬೇಡ

Venuru krushi abhiyana copyಮಾರುಕಟ್ಟೆ ಸಮಿತಿಗಳಲ್ಲಿ ಬಿಳಿ ಚೀಟಿಯ ವ್ಯವಹಾರ ಇಲ್ಲ. ರೈತರು ಇಲ್ಲಿ ಕಮಿಷನ್ ನೀಡಕೂಡದು. ಉತ್ಪನ್ನಗಳನ್ನು ವಿದ್ಯುನ್ಮಾನ ತೂಕದ ಯಂತ್ರದ ಮೂಲಕವೇ ತೂಕ ಮಾಡಿಸಿ ಮತ್ತು ಬೆಲೆ ಕುಸಿದಾಗ ಅಡಮಾನ ಸಾಲ ಯೋಜನೆಯ ಪ್ರಯೋಜನ ಪಡೆದುಕೊಳ್ಳಿ.
    -ಡಾ| ಶಿವಕುಮಾರ್ ಮಗದ
ಹಿರಿಯ ಕೃಷಿ ವಿಜ್ಞಾನಿ

ವೇಣೂರು : ರೈತರು ತಮ್ಮ ಉತ್ಪನ್ನಗಳನ್ನು ಹತಾಶ ಸ್ಥಿತಿಯಲ್ಲಿ ಮಾರಾಟ ಮಾಡುವುದನ್ನು ತಪ್ಪಿಸಲು ಸುಗ್ಗಿಯ ಕಾಲದಲ್ಲಿ ಆರ್ಥಿಕ ಸಹಕಾರ ಒದಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕೃಷಿ ಮಾರುಕಟ್ಟೆ ಸಮಿತಿಗಳಲ್ಲಿ ಮಾರಾಟ ಮಾಡುವ ರೈತರಿಗೆ ಕೃಷಿ ಉತ್ಪನ್ನ ಅಡಮಾನ ಸಾಲ ಯೋಜನೆ ಜಾರಿಗೆ ತರಲಾಗಿದೆ ಎಂದು ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹಿರಿಯ ಕೃಷಿ ವಿಜ್ಞಾನಿ ಡಾ| ಶಿವಕುಮಾರ್ ಮಗದ ಹೇಳಿದರು.
ಅವರು ವೇಣೂರು ಲಯನ್ಸ್ ಕ್ಲಬ್ ಸಭಾಭವನದಲ್ಲಿ ದ.ಕ. ಜಿಲ್ಲಾ ಪಂಚಾಯತು ಬೆಳ್ತಂಗಡಿ ಇದರ ವತಿಯಿಂದ ಜರಗಿದ ಕೃಷಿ ಅಭಿಯಾನ 2016-17 ಕಾರ್ಯಕ್ರಮದಲ್ಲಿ ಮಾತನಾಡಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಪ್ರತ್ಯೇಕ ಆವರ್ತ ನಿಧಿಯನ್ನು ಕ್ರೋಢೀಕರಿಸಿ, ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆ ಸಮಿತಿಗಳಲ್ಲಿ ಅಡವಿಟ್ಟು ಅಲ್ಪಾವಧಿ ಮುಂಗಡ ಸಾಲ ನೀಡುವ ಯೋಜನೆಯನ್ನು ರೂಪಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ವೇಣೂರು ಗ್ರಾ.ಪಂ. ಅಧ್ಯಕ್ಷೆ ಮೋಹಿನಿ ವಿ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ವಿಜ್ಞಾನಿ ಪಾಟೀಲ ರವೀಂದ್ರ ಸಂಗಣಗೇಡ, ಕೃಷಿ ವಿಜ್ಞಾನ ಕೇಂದ್ರದ ಮೀನುಗಾರಿಕೆ ವಿಭಾಗದ ವಿಜ್ಞಾನಿ ಡಾ| ಟಿ.ಎಸ್. ಅಣ್ಣಪ್ಪ ಸ್ವಾಮಿ, ಸಸ್ಯ ಸಂರಕ್ಷಣಾ ವಿಭಾಗದ ವಿಜ್ಞಾನಿ ತೇಜಸ್ ಎ.ಜಿ., ವೇಣೂರು ಗ್ರಾ.ಪಂ. ಉಪಾಧ್ಯಕ್ಷ ಅರುಣ್ ಕ್ರಾಸ್ತ, ಬೆಳ್ತಂಗಡಿ ತೋಟಗಾರಿಕಾ ಇಲಾಖೆಯ ಸಹಾಯಕ ಉಪ ನಿರ್ದೇಶಕ ತಿಲಕ್ ಪ್ರಸಾದ್, ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷ ಸತೀಶ್ ಕೆ., ವೇಣೂರು ಲಯನ್ಸ್ ಕ್ಲಬ್ ಅಧ್ಯಕ್ಷ ಗಿರೀಶ್ ಕೆ.ಎಸ್., ವೇಣೂರು ಗ್ರಾ.ಪಂ. ಸದಸ್ಯ ರಾಜೇಶ್ ಪೂಜಾರಿ ಮೂಡುಕೋಡಿ ಹಾಗೂ ಇಲಾಖೆಯ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳ್ತಂಗಡಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ನಾರಾಯಣ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.