HomePage_Banner_
HomePage_Banner_

ಹೆಗ್ಗಡೆ ಸಂಘದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

   ಬೆಳ್ತಂಗಡಿ : ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಇದರ ವತಿಯಿಂದ ಪ್ರತಿ ವರ್ಷದಂತೆ ಹೆಗ್ಗಡೆ ಸಮಾಜದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ದ್ವಿತೀಯ ಪಿಯುಸಿ ಮೇಲ್ಪಟ್ಟು ವ್ಯಾಸಂಗ ಮಾಡುತ್ತಿರುವ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಹಾಗೂ ವಾರ್ಷಿಕ ರೂ 20 ಸಾವಿರಕ್ಕಿಂತ ಕಡಿಮೆ ಆದಾಯ ಹೊಂದಿರುವ ಅಭ್ಯರ್ಥಿಗಳು ಸಾಮಾನ್ಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಸಮಾಜದಲ್ಲಿ ಆರ್ಥಿಕವಾಗಿ ತೀರಾ ಹಿಂದುಳಿದ ವಿದ್ಯಾರ್ಥಿಗಳು ದತ್ತಕ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ದತ್ತಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವವರಿಗೆ ವಿದ್ಯಾರ್ಹತೆಯ ನಿರ್ಬಂಧವಿರುವುದಿಲ್ಲ. ಭರ್ತಿ ಮಾಡಿದ ಅರ್ಜಿಗಳನ್ನು ಅಧ್ಯಕ್ಷರು, ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ, ಕೋಟೆಬಾಗಿಲು, ಮೂಡುಬಿದಿರೆ-574227 ಈ ವಿಳಾಸಕ್ಕೆ ಆಗಸ್ಟ್ 10ರ ಮುಂಚಿತ ತಲುಪುವಂತೆ ಕಳಿಸಿಕೊಡಬಹುದು. ವಿವರಗಳಿಗೆ ಉದಯ್ ಕುಮಾರ್ ಹೆಗ್ಡೆ ಮೊ:9845235430 ಅನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.