ಜಲ್ಲಿಕಟ್ಟು ಕ್ರೀಡೆಗೆ ಅನುಮತಿ ಸಾಧ್ಯವಿಲ್ಲ

ಸಾಂಪ್ರದಾಯಿಕ ವಿವಾದಿತ ಜಲ್ಲಿಕಟ್ಟು ಕ್ರೀಡೆ ಸುಮಾರು ೫೦೦೦ ವರ್ಷಗಳ ಇತಿಹಾಸ ಹೊಂದಿದೆ ಎಂಬ ಕಾರಣಕ್ಕೆ ಕಾನೂನುಬಾಹಿರವಾಗಿ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ. ಜಲ್ಲಿಕಟ್ಟು ಕ್ರೀಡೆಗೆ ೫೦೦೦ ವರ್ಷಗಳ ಇತಿಹಾಸವಿದೆ. ಆದ್ದರಿಂದ ಅನುಮತಿ ನೀಡಬೇಕೆಂದು ಆಗ್ರಹಿಸುವುದು ಹಾಸ್ಯಾಸ್ಪದವಾಗಿದೆ. ೧೯೮೯ರಿಂದ ಇಲ್ಲಿಯವರೆಗೆ ಒಂದು ಸಾವಿರಕ್ಕೂ ಅಧಿಕ ಬಾಲ್ಯವಿವಾಹದ ಪ್ರಕರಣಗಳು ಬೆಳಕಿಗೆ ಬಂದಿವೆ. ಹಾಗಂತ ಬಾಲ್ಯವಿವಾಹಕ್ಕೆ ಅನುಮತಿ ನೀಡಲು ಸಾಧ್ಯವೇ? ಎಂದು ಪ್ರಶ್ನಿಸಿದ್ದು, ಇದೊಂದು ಸಾಂವಿಧಾನಿಕ ಹಾಗೂ ಶಾಸನಬದ್ಧ ಸಮಸ್ಯೆಯಾಗಿದೆ. ಆದ್ದರಿಂದ ಕಾನೂನಿನ ಮಾನ್ಯತೆ ಪಡೆಯದ ಇಂತಹ ಸಾಂಪ್ರದಾಯಿಕ ಕ್ರೀಡೆಗಳಿಗೆ ಪರವಾನಿಗೆ ನೀಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.