ಕುಲಾಲ ಕುಂಬಾರ ಸಾಂಸ್ಕೃತಿಕ ಸಮಿತಿಯಿಂದ ಆಟಿಡೊಂಜಿ ದಿನ

kulala ati kuta 1 copy ಗುರುವಾಯನಕೆರೆ : ಕುಲಾಲ ಕುಂಬಾರ ಸಾಂಸ್ಕೃತಿಕ ಸಮಿತಿ, ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಜು.24ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಜರುಗಿತು.
ಬೆಳಿಗ್ಗೆ ಕಾರ್ಯಕ್ರಮವನ್ನು ಅಳದಂಗಡಿ ಪ.ಪೂ.ಕಾಲೇಜಿನ ಪ್ರಾಧ್ಯಾಪಕ ಸದಾನಂದ ಕುಲಾಲ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕುಂಬಾರರ ಸೇವಾ ಸಂಘ ಕಾಯರ್ತಡ್ಕ ಇದರ ಗೌರವಾಧ್ಯಕ್ಷ ಸಂಜೀವ ಕುಂಬಾರ ಭಾಗವಹಿಸಿದ್ದರು. ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸಂಘದ ಅಧ್ಯಕ್ಷ ಪದ್ಮಮೂಲ್ಯ ಅನಿಲಡೆ ಉಪಸ್ಥಿತರಿದ್ದರು.
ಬಳಿಕ ಮಕ್ಕಳು, ಮಹಿಳೆಯರು ಮತ್ತು ಪುರುಷರಿಗೆ ಆಟಿಡೊಂಜಿ ದಿನದ ವಿವಿಧ ಸ್ಪರ್ಧೆಗಳು ಮತ್ತು ಮನೋರಂಜನೆಗಳು ನಡೆಯಿತು. ಮಧ್ಯಾಹ್ನ ನಡೆದ ಸಭೆಯಲ್ಲಿ ಪದ್ಮನಾಭ ಇಳಂತಿಲ ಅವರು ದಿಕ್ಸೂಚಿ ಭಾಷಣ ಮಾಡಿ ನಮ್ಮ ಹಿರಿಯರು ಆಟಿ ತಿಂಗಳಲ್ಲಿ ನಡೆಸಿಕೊಂಡು ಬರುತ್ತಿದ್ದ ಆಚರಣೆ ಹಾಗೂ ಸಂಪ್ರಾದಾಯವನ್ನು ಉಳಿಸಿ ಮುಂದಿನ ಪೀಳಿಗೆಗೆ ನೀಡುವಲ್ಲಿ ಇಂತಹ ಕಾರ್ಯಕ್ರಮಗಳು ಅಗತ್ಯವಾಗಿದೆ ಎಂದು ತಿಳಿಸಿ ಆಟಿ ತಿಂಗಳ ಮಹತ್ವದ ಬಗ್ಗೆ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸಂಘದ ಉಪಾಧ್ಯಕ್ಷ ದಿನಕರ ಬಂಗೇರ ಅವರು ವಹಿಸಿ, ಸಮಾಜ ಬಾಂಧವರ ಸಂಘಟನೆ ಮತ್ತು ನಮ್ಮ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದೆ ಸಂಘದ ವತಿಯಿಂದ ಯಕ್ಷಗಾನ ಕಾರ್ಯಕ್ರಮ ಮಾಡುವ ಆಲೋಚನೆಯಿದ್ದು, ಎಲ್ಲರ ಸಹಕಾರ ಕೋರಿದರು. ಮುಖ್ಯ ಅತಿಥಿ ರಾಜ್ಯ ಕುಲಾಲ ಕುಂಬಾರ ಸಂಘದ ಪ್ರಧಾನ ಕಾರ್ಯದರ್ಶಿ ಪದ್ಮಕುಮಾರ್ ಮಾತನಾಡಿ ಸಮಾಜದ ಯುವಕರು ಸಂಘಟನಾತ್ಮಕವಾಗಿ ಕಾರ್ಯಕ್ರಮ ಹಮ್ಮಿಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಳಾಲು ಗ್ರಾ.ಪಂ ಪಿಡಿಒ ಮೋಹನ್‌ಬಂಗೇರ ಮಾತನಾಡಿ ಕುಂಭ ಕಲೆಯನ್ನು ಇಡೀ ವಿಶ್ವಕ್ಕೆ ಪರಿಚಯಿಸಿ ನಮ್ಮ ಸಮಾಜದವರು ನಿತ್ಯ ಮನೆ ಬಳಕೆಯಲ್ಲಿ ಇದನ್ನು ಉಪಯೋಗಿಸುವಂತೆ ಸಲಹೆಯಿತ್ತರು.
ವೇದಿಕೆಯಲ್ಲಿ ಮೇಲಂತಬೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷೆ ಶ್ರೀಮತಿ ವಿಮಲ ಕಂಚಿಂಜೆ, ಉದ್ಯಮಿ ಜಗದೀಶ್ ಮೂಲ್ಯ ಪರಾರಿ, ಶಿರ್ಲಾಲು ಮೂಲ್ಯರ ಯಾನೆ ಕುಂಬಾರರ ಸಂಘದ ಅಧ್ಯಕ್ಷ ರಾಜೇಶ್ ಯನ್, ಬಳ್ಳಂಜ ಮೂಲ್ಯರ ಯಾನೆ ಕುಂಬಾರರ ಸಂಘದ ಅಧ್ಯಕ್ಷ ರಮೇಶ್ ಮೂಲ್ಯ, ಮೂಲ್ಯರ ಯಾನೆ ಕುಂಬಾರರ ಸಂಘ ಅರಸಿನಮಕ್ಕಿಯ ಅಧ್ಯಕ್ಷ ಧರ್ಣಪ್ಪ ಮೂಲ್ಯ, ಮೂಲ್ಯರ ಯಾನೆ ಕುಂಬಾರರ ಸಂಘ ಗುರುವಾಯನಕೆರೆಯ ಸದಸ್ಯ ಲಿಂಗಪ್ಪ ಮೂಲ್ಯ ಪಾಂಡೇಶ್ವರ, ಕಾರ್ಯಕ್ರಮ ಸಂಘಟಕ ಉಮೇಶ್ ಕುಲಾಲ್, ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ವರದಿಗಾರ ಬಿ.ಎಸ್.ಕುಲಾಲ್ ಉಪಸ್ಥಿತರಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಿತು.
ಪ್ರತಿಮಾ ನಾಗರಾಜ್ ಸ್ವಾಗತಿಸಿದರು. ಅಶ್ವಿತ್ ಕುಲಾಲ್ ಕಾರ್ಯಕ್ರಮ ನಿರೂಪಿಸಿ, ಭೂಮಿಕಾ ಧನ್ಯವಾದವಿತ್ತರು. ಯಕ್ಷಗಾನ ಕಲಾವಿದ ನಂದಕುಮಾರ್ ಉಜಿರೆ ಸಾಂಸ್ಕ್ರತಿಕ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.