ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಉತ್ಸವ

Advt_NewsUnder_1
Advt_NewsUnder_1
Advt_NewsUnder_1

kalmanja 1

kalmanja

 ಕಲ್ಮಂಜ : ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರದ ದೇವಸ್ಥಾನದಲ್ಲಿ ನಾಗರ ಪಂಚಮಿಯ ದಿನವಾದ ಆ.7ರಂದು ಶ್ರೀ ನಾಗ ದೇವರಿಗೆ ವಿಶೇಷ ಪೂಜೆ, ಹಾಲು ಮತ್ತು ಸಿಯಾಳ ಅಭಿಷೇಕ ನಡೆಯಿತು.

ಈ ಪೂಜಾ ಕಾರ್ಯಕ್ರಮದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೋಹನ್ ಗೌಡ ಕಲ್ಮಂಜ, ಗ್ರಾಮ ಪಂಚಾಯತ್ ಸದಸ್ಯ ರಾಧಾಕೃಷ್ಣ ಗೌಡ, ಅಂತರಬೈಲು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷರಾದ ರಮೇಶ್ ಗೌಡ ಗುಲ್ಲೋಡಿ, ಊರಿನ ಗಣ್ಯರಾದ ಆದಪ್ಪ ಗೌಡ ಬಂಡ್ರಜಾಲು, ಬಾಬು ಗೌಡ ಕೊಂಬಗುರಿ ಹಾಗೂ ನೂರಾರು ಸಂಖ್ಯೆಯಲ್ಲಿ ಊರ ಹಾಗೂ ಪರವೂರ ಭಕ್ತರು ಆಗಮಿಸಿ ಶ್ರೀ ನಾಗ ದೇವರ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.