ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ : ಶ್ರೀ ವರಮಹಾಲಕ್ಷ್ಮೀ ಪೂಜೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 1

pooje 1

pooje 2

pooje

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ), ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.12ರಂದು ಜರಗಿತು.
ಶ್ರಾವಣ ಮಾಸದ ಎರಡನೇ ಶುಕ್ರವಾರ ಬರುವ ವರಮಹಾಲಕ್ಷ್ಮಿ ವೃತವನ್ನು ಎಲ್ಲಾ ಮುತ್ತೈದೆಯರು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಾರೆ. ಲಕ್ಷ್ಮಿ ಪರಿಶುದ್ಧತೆಯ ಸಂಕೇತ. ಹಾಗಾಗಿ, ವರಮಹಾಲಕ್ಷ್ಮೀ ಹಬ್ಬದಂದು ಮುಂಜಾನೆ ಎದ್ದು ಮನೆಯನ್ನು ಶುಚಿಗೊಳಿಸಿ, ಶುಭ್ರವಾದ ಬಟ್ಟೆ ತೊಟ್ಟು ಮಡಿಯಲ್ಲಿ ವರ ಮಹಾಲಕ್ಷ್ಮೀ ವೃತ ಮಾಡಿದವರಿಗೆ ದಾರಿದ್ರ್ಯ ಕಳೆದು, ಆಯುರಾರೋಗ್ಯ, ಧನ, ಸಂಪತ್ತು, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆ ಇದೆ ಎಂದು ಉಜಿರೆ ಯಕ್ಷಗಾನ ಕಲಾವಿದ ಅಶೋಕ್ ಭಟ್ ಧಾರ್ಮಿಕ ಪ್ರವಚನದ ಮೂಲಕ ತಿಳಿಸಿದರು.
ಬೆಳ್ತಂಗಡಿ ಶ್ರೀ.ಗು.ನಾ.ಸ್ವಾ.ಸೇ.ಸಂಘದ ನಿಕಟಪೂರ್ವ ಅಧ್ಯಕ್ಷ ಪೀತಾಂಬರ ಹೇರಾಜೆ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಚಿದಾನಂದ ಇಡ್ಯ, ಮಹಿಳಾ ಬಿಲ್ಲವ ವೇದಿಕೆ ನಿಕಟಪೂರ್ವಾಧ್ಯಕ್ಷೆ ವಿನೋದಿನಿ ರಾಮಪ್ಪ, ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ರಾಜಶ್ರೀ ರಾಮನ್, ಮಹಿಳಾ ಬಿಲ್ಲವ ವೇದಿಕೆ ಉಪಾಧ್ಯಕ್ಷೆ ಶಾಂತ ಬಂಗೇರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಮಹಿಳಾ ಬಿಲ್ಲವ ವೇದಿಕೆ ಸುಧಾಮಣಿ, ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕಾಧ್ಯಕ್ಷೆ ಸುಜಿತಾ ವಿ ಬಂಗೇರ ಸರ್ವರನ್ನು ಸ್ವಾಗತಿಸಿದರು. ಧನ್ಯವಾದ ರಾಜಶ್ರೀ ರಾಮನ್ ನೆರವೇರಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.