ಬೆಳ್ತಂಗಡಿ : ಸ್ವಾತಂತ್ರ್ಯೋತ್ಸವ ಮೆರವಣಿಗೆಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದ ದಲಿತ ನಾಯಕರು ಹಾಗೂ ಕಾರ್ಯಕರ್ತರ ಬಂಧನ

c4

c5

c 1

c2

c3C

ZÀ1

ಬೆಳ್ತಂಗಡಿ : ಸ್ವಾತಂತ್ರ್ಯೋತ್ಸವ ಮೆರವಣಿಗೆಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಬೆಳ್ತಂಗಡಿಯಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡರು ಮತ್ತು ಸದಸ್ಯರುಗಳನ್ನು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಆ. 15 ರಂದು ಬೆಳಿಗ್ಗೆ ಬಂಧಿಸಲಾಯಿತು.
ಬೆಳ್ತಂಗಡಿ ಬಸ್ಸು ನಿಲ್ದಾಣದ ಬಳಿಯಿಂದ ಸ್ವಾತಂತ್ರ್ಯೋತ್ಸವದ ಪಥಸಂಚಲನ, ಹಾಗೂ ಮೆರವಣಿಗೆ ಸಂತೆಕಟ್ಟೆ ತಲುಪುತ್ತಿದ್ದಂತೆ ಈ ಮೊದಲೇ ಘೋಷಿಸಿದ್ದ ದಲಿತ ಮುಖಂಡರು ಮೆರವಣಿಗೆಗೆ ಅಡ್ಡಿಪಡಿಸಿದರು. ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದ ದಲಿತ ನಾಯಕರು ಹಾಗೂ ಕಾರ್ಯಕರ್ತರನ್ನು ಈ ವೇಳೆ ಪೊಲೀಸರು ಬಂಧಿಸಿ ತಮ್ಮ ವಾಹನದಲ್ಲಿ ಠಾಣೆಗೆ ಕರೆದೊಯ್ದರು. ಬಳಿಕ ಅವರ ವಿರುದ್ಧ ಪ್ರಕರಣ ದಾಖಲಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.