ಇಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಗುರುಜಯಂತಿ

jp 1

jp

jp2

jp3

jp4

4.80 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ ಬೈಕ್ ಜಾಥಾ ಕಾರ್ಯಕ್ರಮ

ಬೆಳ್ತಂಗಡಿ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ 162ನೇ ಗುರುಜಯಂತಿ ಹಾಗೂ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಮತ್ತು ದೀಕ್ಷಾಗ್ರಂಥಿ ಧಾರಣೆ ಸಮಾರಂಭವು ಇಂದು ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ಜರಗಲಿದೆ.  ಸಂಘಟನೆಗೆ ಯುವ ಸಮುದಾಯವನ್ನು ಸೆಳೆಯುವ ನಿಟ್ಟಿನಲ್ಲಿ ಈ ವರ್ಷ ವಿಶೇಷವಾಗಿ ಬೈಕ್ ಜಾಥವನ್ನು ನಡೆಸಲಾಗುತ್ತಿದೆ. ಬೆಳಿಗ್ಗೆ 9 ಗಂಟೆಯಿಂದ ಬೆಳ್ತಂಗಡಿ ಹಳೆಕೋಟೆಯಿಂದ ಪ್ರಾರಂಭಗೊಂಡು ಬ್ರಹ್ಮಶ್ರೀ ನಾರಾಯಣ ಗುರುಗಳ ಬಾವಚಿತ್ರದೊಂದಿಗೆ ವೈಭವದ ಮೆರವಣಿಗೆ ಕೂಡ ನಡೆದಿದೆ. ಬೈಕ್ ಜಾಥದಲ್ಲಿ ತಾಲೂಕಿನಾದ್ಯಂತ ಸುಮಾರು ಐನೂರಕ್ಕೂ ಅಧಿಕ ಬೈಕ್‌ಗಳು ಗಮನಸೆಳೆದಿದೆ.

 ಸಭಾ ಕಾರ್ಯಕ್ರಮದಲ್ಲಿ ಧರ್ಮಸ್ಥಳ ನಿತ್ಯಾನಂದನಗರ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಉದ್ಘಾಟನೆಯನ್ನು ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ನೆರವೇರಿಸಿದರು. ಬಿಲ್ಲವ ಮಹಾಮಂಡಲದ ವಕ್ತಾರ ಹರಿಕೃಷ್ಣ ಬಂಟ್ವಾಳ ಪ್ರಧಾನ ಭಾಷಣ ಮಾಡಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಭಗೀರಥ ಜಿ. ವಹಿಸಿದ್ದು   ಹಾಗೂ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಚಿದಾನಂದ ಇಡ್ಯ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ತನುಜಾ ಶೇಖರ್ ಭಾಗವಹಿಸಿದ್ದರು.
ಅಲ್ಲದೇ ಸಮಾಜದ 150 ವಿದ್ಯಾರ್ಥಿಗಳಿಗೆ 4.80 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕರ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಸನ್ಮಾನ ಹಾಗೂ ದೀಕ್ಷಾಗ್ರಂಥಿ ಧಾರಣೆ ನಡೆದಿದೆ. ಈ ಬಾರಿ ಪಿಯುಸಿ ವಿದ್ಯಾಭ್ಯಾಸಕ್ಕೆ ಸೇರ್ಪಡೆಗೊಂಡ ಆಯ್ದ ಶೇ. 85 ಕ್ಕಿಂತ ಅಧಿಕ ಅಂಕ ಪಡೆದ 16 ವಿದ್ಯಾರ್ಥಿ ಗಳನ್ನು ಶೈಕ್ಷಣಿಕವಾಗಿ ದತ್ತು ತೆಗೆದುಕೊಳ್ಳಲಾಗಿದೆ . ಸಭಾ ಕಾರ್ಯಕ್ರಮದ ನಂತರ ಮಧ್ಯಾಹ್ನ 2 ಗಂಟೆಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಚಲನಚಿತ್ರ ಪ್ರದರ್ಶನ ಗೊಳ್ಳಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.