ನಾರಾವಿ: ಇಂದು ನಾರಾವಿ ಪಂಚಾಯಿತಿ ಕಟ್ಟಡ ಲೋಕಾರ್ಪಣೆ

NARAVIನಾರಾವಿ : ದ.ಕ ಜಿ.ಪಂ ಮಂಗಳೂರು, ತಾ.ಪಂ ಬೆಳ್ತಂಗಡಿ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ಉಪವಿಭಾಗ, ಬೆಳ್ತಂಗಡಿ ಹಾಗೂ ಗ್ರಾ.ಪಂ ನಾರಾವಿ ಇದರ ಸಂಯುಕ್ರ ಆಶ್ರಯದಲ್ಲಿ ನಾರಾವಿ ಗ್ರಾಮ ಪಂಚಾಯತ್‌ನ ನೂತನ ಪಂಚಾಯತ್ ಕಟ್ಟಡ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭವು ಇಂದು ನಾರಾವಿ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆದಿದೆ.
ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶಾಸಕ ಕೆ.ವಸಂತ ಬಂಗೇರ ವಹಿಸಿದ್ದರು. ಕರ್ನಾಟಕ ಸರ್ಕಾರ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ, ಅರಣ್ಯ ಮತ್ತು ಜೀವಿಶಾಸ್ತ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ಜಿ.ಪಂ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಮಂಗಳೂರು ಲೋಕಸಭಾ ಕ್ಷೇತ್ರ ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ಸರ್ಕಾರ ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ, ಕರ್ನಾಟಕ ಸರ್ಕಾರ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬೆಳ್ತಂಗಡಿ ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ನಾರಾವಿ ಗ್ರಾ.ಪಂ ಅಧ್ಯಕ್ಷ ರವೀಂದ್ರ ಪೂಜಾರಿ, ನಾರಾವಿ ಕ್ಷೇತ್ರ ಜಿ.ಪಂ ಸದಸ್ಯ ಧರಣೇಂದ್ರ ಕುಮಾರ್, ನಾರಾವಿ ಕ್ಷೇತ್ರ ತಾ.ಪಂ ಸದಸ್ಯೆ ಶ್ರೀಮತಿ ರೂಪಲತಾ, ಮಂಗಳೂರು ದ.ಕ ಜಿ.ಪಂ ಮುಖ್ಯ ಕಾಯನಿರ್ವಹಣಾಧಿಕಾರಿ ಶ್ರೀಮತಿ ಪಿ.ಐ ಶ್ರೀ ವಿದ್ಯಾ ಆಗಮಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.