ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಕೇಂದ್ರ ಬ್ಯಾಂಕಿನಿಂದ ಪ್ರಶಸ್ತಿ

Advt_NewsUnder_1
Advt_NewsUnder_1
Advt_NewsUnder_1

mundaje ca bank 100% vasulathi copyಮುಂಡಾಜೆ : 2015-16 ನೇ ಸಾಲಿನಲ್ಲಿ ಸದಸ್ಯರಿಂದ ಬರತಕ್ಕ ಎಲ್ಲಾ ವಿಧದ ಸಾಲಗಳನ್ನು ಶೇಕಡಾ ನೂರು ವಸೂಲಿ ಮಾಡಿ ಸಂಘದ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತನ್ನ 2015-16 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪತ್ರ ನೀಡಿ ಗೌರವಿಸಿದೆ. ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಳೆದ ಐದು ವರುಷಗಳಿಂದ ಸತತವಾಗಿ ಸಾಲ ವ್ಯವಹಾರಗಳಲ್ಲಿ 100% ವಸೂಲಾತಿ ಮಾಡಿ ಮುನ್ನಡೆಯುತ್ತಿದೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಕಳೆದ ಐದು ವರ್ಷಗಳಿಂದ ಗೌರವ ಸ್ವೀಕರಿಸುತ್ತಿದೆ.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಎನ್.ಎಸ್. ಗೋಖಲೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ನಾರಾಯಣ ಫಡ್ಕೆ ಇವರನ್ನು ಸ್ಮರಣಿಕೆ ನೀಡಿ, ಶಾಲು ಹೊದೆಸಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ರವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಪ್ರಕಾಶ ನಾರಾಯಣ ರಾವ್, ಮುಂಡಾಜೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಅನಂತ ಭಟ್ ಮಚ್ಚಿಮಲೆ, ಸಹಕಾರ ಸಂಘದ ಉಪನಿಬಂಧಕರು, ಜಿಲ್ಲಾ ಬ್ಯಾಂಕಿನ ನಿರ್ದೇಶಕರು, ಮೇಲ್ವಿಚಾರಕರು ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.