ಬೆಳ್ತಂಗಡಿ : 1000ನೇ ಮದ್ಯವರ್ಜನ ಶಿಬಿರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

BDY1

bdy2

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,  ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ,  ಬೆಂಗಳುರು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಳ್ತಂಗಡಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ , ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು, ನೆರಿಯ, ಕಣಿಯೂರು  ರೈತಬಂಧು ಆಹಾರೋದ್ಯಮ , ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ, ಸಿಂಡಿಕೇಟ್ ಬ್ಯಾಂಕ್ ಬೆಳ್ತಂಗಡಿ ಶಾಖೆ, ಬೆಳ್ತಂಗಡಿ ಶ್ರೀ ವಿನಾಯಕ ರೈಸ್ ಇಂಡಸ್ಟ್ರೀಸ್ ಹಳೆಕೋಟೆ , ಬೆಳ್ತಂಗಡಿ ವಕೀಲರ ಸಂಘ,  ಇವುಗಳ ಸಂಯುಕ್ತ ಆಶ್ರಯದಲ್ಲಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವೀ.ಹೆಗ್ಗಡೆಯವರ ಮಾರ್ಗದರ್ಶನಗಳೊಂದಿಗೆ 1000ನೇ ಮದ್ಯವರ್ಜನ ಶಿಬಿರವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನ ಬೆಳ್ತಂಗಡಿಯಲ್ಲಿ ಇಂದು ನಡೆಯಿತು.
ಕಣಿಯೂರು ರೈತಬಂಧು ಆಹಾರೋದ್ಯಮದ ಶಿವಶಂಕರ ನಾಯಕ್ ಸಮಾರಂಭದ ಉದ್ಘಾಟನೆಯನ್ನು ನಿರ್ವಹಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್, ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ ಹಣಕಾಸು ನಿರ್ದೇಶಕರು ಶಾಂತಾರಾಮ್ ಪೈ, ಶಾಸಕ ವಸಂತ ಬಂಗೇರ ಆಗಮಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.