ಮುಂಡಾಜೆ : ರೂ.30ಲಕ್ಷ ವೆಚ್ಚದ ದಾದಿಯರ ವಸತಿ ಗೃಹ – ಉಪಕೇಂದ್ರಕ್ಕೆ ಶಂಕುಸ್ಥಾಪನೆ

Mundaje arogya kendra vasathigrahakke sankusthapane copyಮುಂಡಾಜೆ : ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬೆಳ್ತಂಗಡಿ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳ್ತಂಗಡಿ, ಕರ್ನಾಟಕ ಆರೋಗ್ಯ ಪದ್ಧತಿ ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆ ಇದರ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಡಾಜೆಯಲ್ಲಿ ಸುಮಾರು ರೂ.೩೦ ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ದಾದಿಯರ ವಸತಿ ಗೃಹ ಹಾಗೂ ಉಪಕೇಂದ್ರ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮವು ಅ.25ರಂದು ಜರುಗಿತು.
ಬೆಳ್ತಂಗಡಿ ಕ್ಷೇತ್ರದ ಶಾಸಕ ಕೆ. ವಸಂತ ಬಂಗೇರ ನೂತನ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆಯನ್ನು ನೆರವೇರಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಮುಂಡಾಜೆ ಗ್ರಾಮ ಪಂಚಾಯತು ಅಧ್ಯಕ್ಷೆ ಶ್ರೀಮತಿ ಶಾಲಿನಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಪಂಚಾಯತದ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ದ.ಕ ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಉಜಿರೆ ಕ್ಷೇತ್ರದ ಜಿ.ಪಂ ಸದಸ್ಯೆ ಶ್ರೀಮತಿ ನಮೀತಾ, ಧರ್ಮಸ್ಥಳ ಜಿ.ಪಂ ಕ್ಷೇತ್ರದ ಸದಸ್ಯ ಕೊರಗಪ್ಪ ನಾಯ್ಕ್, ತಾಲೂಕು ಪಂಚಾಯತು ಸದಸ್ಯೆ ಶ್ರೀಮತಿ ಲೀಲಾವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಎಂ. ರಾಮಕೃಷ್ಣ ರಾವ್, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಸಿ.ಆರ್. ನರೇಂದ್ರ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ನಗರ ಪಂಚಾಯತು ಅಧ್ಯಕ್ಷ ಮುಗುಳಿ ನಾರಾಯಣ ರಾವ್, ನೆರಿಯ ಗ್ರಾ.ಪಂ ಸದಸ್ಯ ಅಶ್ರಫ್, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ವೈದ್ಯಾಧಿಕಾರಿ ಡಾ| ಉದಾತ್ತಾ, ಯಂಗ್ಸ್ ಛಾಲೆಂಜರ‍್ಸ್ ಕ್ರೀಡಾ ಸಂಘದ ಸಂಚಾಲಕ ನಾಮದೇವ ರಾವ್, ಮುಂಡಾಜೆ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಾರಾಯಣ ಫಡಕೆ, ಮುಂಡಾಜೆ ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.