ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಕ್ರೀಡೆ ಸಹಕಾರಿ: ದಿವ್ಯಜ್ಯೋತಿ

Advt_NewsUnder_1
Advt_NewsUnder_1
Advt_NewsUnder_1

Thaluku kreeda kuta copy  ತಾಲೂಕು ಮಟ್ಟದ ಪ್ರಾಥಮಿಕ – ಪ್ರೌಢ ಶಾಲಾ ಕ್ರೀಡಾಕೂಟ

ಬೆಳ್ತಂಗಡಿ: ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು, ಪಟ್ಟಣ ಪಂಚಾಯತ್ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಸರಕಾರಿ ಪ್ರೌಢ ಶಾಲೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಕ್ರೀಡಾಕೂಟ ನ.10 ಮತ್ತು ನ.11ರಂದು ಸ.ಪ್ರೌ.ಶಾಲೆ ಬೆಳ್ತಂಗಡಿಯಲ್ಲಿ ಜರುಗಿತು.
ಕ್ರೀಡಾಕೂಟವನ್ನು ತಾ.ಪಂ. ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳಬೇಕು, ಮಕ್ಕಳಲ್ಲಿ ಆತ್ಮವಿಶ್ವಾಸ, ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ. ಇಲ್ಲಿ ಭಾಗವಹಿಸಿದ ಮಕ್ಕಳು ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆಯಲಿ ಎಂದು ಹಾರೈಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನ.ಪಂ. ಅಧ್ಯಕ್ಷ ಮುಗುಳಿ ನಾರಾಯಣ ರಾವ್ ತಾಲೂಕು ಮಟ್ಟದ ಕ್ರೀಡಾ ಕೂಟ ಮಾಡಲು ಸುಮಾರು ರೂ.5ರಿಂದ ರೂ.6 ಲಕ್ಷದಷ್ಟು ಖರ್ಚು ಆಗುತ್ತಿದೆ. ಸರಕಾರ ಕೇವಲ ರೂ.25 ಸಾವಿರ ನೀಡಿದರೆ ಸಾಲದು ಇದನ್ನು ಹೆಚ್ಚಿಸುವ ಪ್ರಯತ್ನಗಳು ನಡೆಯಬೇಕು ಎಂದರು. ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಅವರು ಬೆಳ್ತಂಗಡಿ ತಾಲೂಕಿನಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆ ಸಂಘಟಿಸು ವಷ್ಟು ಶಕ್ತಿವಂತರಾದ ದೈಹಿಕ ಶಿಕ್ಷಕರಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ ದರು. ತಾ.ಪಂ ಕಾರ್ಯನಿರ್ವಾಹಣಾ ಧಿಕಾರಿ ಸಿ.ಆರ್ ನರೇಂದ್ರ ಶುಭ ಕೋರಿ ದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಶಂಕರ್ ಭಟ್ ಮಾತನಾಡಿ ಕ್ರೀಡಾ ವಿದ್ಯಾರ್ಥಿಗಳಿಗೆ ಸಮವಸ್ತ್ರಕ್ಕಾಗಿ ಜಿ.ಪಂ. ರೂ.೧ಲಕ್ಷ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕ್ರೀಡಾ ಕೂಟಕ್ಕೆ ಸಹಕಾರ ನೀಡಿದ ನ.ಪಂ. ಅಧ್ಯಕ್ಷ ಮುಗುಳಿ ನಾರಾಯಣ ರಾವ್, ತಾ.ಪಂ. ಕಾರ್ಯನಿರ್ವಾಹಣಾ ಧಿಕಾರಿ ಸಿ.ಆರ್. ನರೇಂದ್ರ, ರಾಷ್ಟ್ರ ಪ್ರಶಸ್ತಿ ಪಡೆದ ಶಿಕ್ಷಕ ಪ್ರಭಾಕರ ಹೆಗ್ಡೆ ಇವರನ್ನು ಸನ್ಮಾನಿಸಲಾಯಿತು. ಕ್ರೀಡಾ ವಿದ್ಯಾರ್ಥಿ ಗಳಿಗೆ ಸಾಂಕೇತಿಕವಾಗಿ ಸಮವಸ್ತ್ರ ವಿತರಿಸಲಾಯಿತು.
ವೇದಿಕೆಯಲ್ಲಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್, ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ಮಂಜುನಾಥ್, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಗುರು ಹೆಬ್ಬಾರ್, ರಮೇಶ್ ಮಯ್ಯ, ತಾಲೂಕು ಕ್ರೀಡಾಧಿಕಾರಿ ಪ್ರಭಾಕರ ನಾರಾವಿ, ಶಿಕ್ಷಣ ಸಂಯೋಜಕ ರಮೇಶ್, ಗಣೇಶ್ ಐತಾಳ್ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಯಶೋಧರ ಸುವರ್ಣ ಪ್ರಾಸ್ತವಿಕವಾಗಿ ಮಾತನಾಡಿ ದರು. ಬೆಳ್ತಂಗಡಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಈಶ್ವರಿ ವಂದಿಸಿ ದರು. ದೈಹಿಕ ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.