ಬಂಗಾಡಿ : ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಈ ಬಾರಿ ತಾಲೂಕಿನ ಅತ್ಯುತ್ತಮ ಸಹಕಾರಿ ಸಂಸ್ಥೆಯೆಂದು ಪ್ರಶಸ್ತಿ ಲಭಿಸಿದೆ. ಮಂಗಳೂರಿನ ನೆಹರು ಮೈದಾನ ಫುಟ್ಬಾಲ್ ಗ್ರೌಂಡ್ನಲ್ಲಿ ನ.18 ರಂದು ನಡೆದ 63ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವನ್ನು ಬೆಳ್ತಂಗಡಿ ತಾಲೂಕಿನ ಅತ್ಯುತ್ತಮ ಸಹಕಾರ ಸಂಘವೆಂದು ಕರ್ನಾಟಕ ರಾಜ್ಯದ ಸಹಕಾರಿ ಸಚಿವ ಮಹದೇವಪ್ರಸಾದ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ರಾಜೇಂದ್ರ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ ನಿರಂಜನ ಬಾವಂತಬೆಟ್ಟು, ಹಾಗೂ ಇನ್ನಿತರ ಗೌರವಾನ್ವಿತ ಅತಿಥಿಗಳ ಉಪಸ್ಥಿತಿಯಲ್ಲಿ ಸಂಘದ ಅಧ್ಯಕ್ಷ ಎನ್.ಲಕ್ಷ್ಮಣ ಗೌಡ, ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಉಮೇಶ್ ಎ.ಬಿ ರವರಿಗೆ ಉತ್ತಮ ಸಹಕಾರ ಸಂಘವೆಂದು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ನೀಲಯ್ಯ ನಾಯ್ಕ ಹರೀಶ್ ಸಾಲಿಯಾನ್ ಮೊರ್ತಾಜೆ, ಸಂಸ್ಥೆಯ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.