ಬೆಳ್ತಂಗಡಿ ತಾಲೂಕು ಮಟ್ಟದ ಕರಾವಳಿ ಉತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

karavali 1

karavali 2

karavali 3

karavali 4

karavali 5

karavali 6

karavali 7

karavali

ಬೆಳ್ತಂಗಡಿ: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಡಿ. 18 ರಂದು ನಡೆದ ತಾಲೂಕು ಮಟ್ಟದ ಕರಾವಳಿ ಉತ್ಸವ ಸಂಭ್ರಮವನ್ನು ತೆಂಗಿನ ಹೊಂಬಾಳೆ ಅರಳಿಸುವ ಮೂಲಕ ಅವರು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ಅವರು ವಹಿಸಿದ್ದು, ಕರಾವಳಿಯ ಸಂಸ್ಕೃತಿಯ ಸೊಗಡು ಹಳ್ಳಿ ಹಳ್ಳಿಗೂ ಪಸರಿಸುವ ನಿಟ್ಟಿನಲ್ಲಿ ಪ್ರತೀ ತಾಲೂಕು ಮಟ್ಟದಲ್ಲಿ ಇಂತಹಾ ಆಚರಣೆ ಕೈಗೊಂಡು ಕೊನೆಗೆ ಜಿಲ್ಲಾ ಕೇಂದ್ರ ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ನಡೆಯುವ ನಿಟ್ಟಿನಲ್ಲಿ ಈ ವ್ಯವಸ್ಥೆ ಸರಕಾರ ಸೂಚಿಸಿದೆ.
ಮುಖ್ಯ ಅತಿಥಿಯಾಗಿದ್ದ ತಾ.ಪಂ ಉಪಾಧ್ಯಕ್ಷೆ ವೇದಾವತಿ, ತಹಶಿಲ್ದಾರ್ ತಿಪ್ಪೇಸ್ವಾಮಿ,  ತಾ.ಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಸಿ. ಆರ್ ನರೇಂದ್ರ ಉಪಸ್ಥಿತರಿದ್ದರು.
ಶಿಕ್ಷಕ ಧನಂಜಯ ಮತ್ತು ಗುರುದೇವ ಕಾಲೇಜಿನ ಉಪನ್ಯಾಸಕಿ ಹೇಮಾವತಿ ಕೆ ಕಾರ್ಯಕ್ರಮ ನಿರೂಪಿಸಿದರು.
ವಾಣಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು.
ಲಾಲ ಗ್ರಾ. ಪಂ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಧನ್ಯವಾದವಿತ್ತರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ. ಜಿ ಲಕ್ಷ್ಮಣ ಶೆಟ್ಟಿ ಪ್ರಾಸಬದ್ಧ ಮಾತುಗಳೊಂದಿಗೆ ಪ್ರಸ್ತಾವನೆಗೈದರು.
ವೈಭವದ ಮೆರವಣಿಗೆ:
ಇದಕ್ಕೂ ಮೊದಲು ಡಿಸಿಸಿ ಬ್ಯಾಂಕ್ ಮುಂಭಾಗದಿಂದ ಮೈದಾನದವರೆಗೆ ವೈಭವದ ಮೆರವಣಿಗೆ ಸಾಗಿ ಬಂತು. ಡೋಲ ಬಡಿಯುವ ಮೂಲಕ ಪಟ್ಟಣ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ಅವರು ಚಾಲನೆ ನೀಡಿದರು.
ಕುದುರೆ ಗಾಡಿ, ಕೀಲು ಕುದುರೆ ಮತ್ತು ಗೊಂಬೆ ಬಳಗ, ಬ್ಯಾಂಡ್‌ಸೆಟ್, ಕಟ್ಟದ ಕೋಳಿ, ಕೊಂಬು ಕಹಳೆ, ಕಂಬಳದ ಕೋಣ, ಇತ್ಯಾಧಿ ಕಲಾಪ್ರಕಾರ ಮತ್ತು ವೈವಿದ್ಯಗಳು ಮೆರವಣಿಗೆಯ ಅಂದ ಹೆಚ್ಚಿಸಿದವು. ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬಂದಿಗಳು, ಸ್ಥಳೀಯ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕವೃಂದ, ಹಾಗೂ ಸಾರ್ವಜನಿಕರು ಮೆರವಣಿಗೆಯಲ್ಲಿ ತೊಡಗಿಸಿಕೊಂಡಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.