ಪಡಿತರ ಕಾರ್ಡ್‌ದಾರರಿಗೆ ಸೂಚನೆ

  ಬೆಳ್ತಂಗಡಿ : ಕರ್ನಾಟಕ ಸರಕಾರದ ಅನ್ನ ಭಾಗ್ಯ ಯೋಜನೆಯಡಿ ಸಾರ್ವಜನಿಕ ವಿತರಣಾ ಪದ್ದತಿಯಡಿಯಲ್ಲಿ ಉಚಿತ/ಸಹಾಯಧನಯುಕ್ತ ಪಡಿತರ ಪದಾರ್ಥಗಳನ್ನು ಪಡೆಯುವ ಪಡಿತರ ಚೀಟಿದಾರರು ತಮ್ಮ ಕಾರ್ಡ್‌ಗೆ ಆಧಾರ್ ಜೋಡಣೆ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಆಧಾರ್ ಸಂಖ್ಯೆ ಜೋಡಣೆಯಾಗದ ಪಡಿತರ ಕಾರ್ಡ್‌ಗಳು ಹಾಗೂ ಆಧಾರ್ ಸಂಖ್ಯೆಗೆ ಜೋಡಣೆಯಾಗದ ಪಡಿತರ ಕಾರ್ಡ್‌ದಾರರ ಸದಸ್ಯರ ಹೆಸರುಗಳನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಇಂತಹ ಪಡಿತರ ಚೀಟಿದಾರರು ಆಧಾರ್ ನೊಂದಣಿ ಮಾಡಲು ಪಡಿತರ ಚೀಟಿ ಮತ್ತು ಪಡಿತರ ಚೀಟಿಯಲ್ಲಿರುವ ಸದಸ್ಯರ ಆಧಾರ್ ಸಂಖ್ಯೆಗಳನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಂಚತಂತ್ರಾಂಶದಲ್ಲಿ ಬಯೋ ಲಾಗಿನ್ ಮೂಲಕ ನೊಂದಾಯಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಆದ್ದರಿಂದ ಸಾರ್ವಜನಿಕರು ದಾಖಲೆಗಳೊಂದಿಗೆ ಗ್ರಾಮ ಪಂಚಾಯತ್‌ನ್ನು ಸಂಪರ್ಕಿಸಿ ತಮ್ಮ ಪಡಿತರ ಚೀಟಿಗಳನ್ನು ಸರಿಪಡಿಸಿಕೊಳ್ಳುವಂತೆ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.