HomePage_Banner_
HomePage_Banner_
HomePage_Banner_

ಬೆಳ್ತಂಗಡಿ : ಬೃಹತ್ ಉಚಿತ ದಂತ ವೈದ್ಯಕೀಯ ಶಿಬಿರ

Advt_NewsUnder_1

hhh  ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹಾಗು ವಿವಿಧೋದ್ದೇಶ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜ.22ರಂದು ಬೃಹತ್ ಉಚಿತ ದಂತ ವೈದ್ಯಕೀಯ ಶಿಬಿರ ನಡೆಯಿತು.
ಇದರಲ್ಲಿ 130 ಶಿಬಿರಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಕಾರ್ಯಕ್ರಮವನ್ನು ತಾಲೂಕಿನ ಶಾಸಕ ವಸಂತ ಬಂಗೇರ ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕು ದಂಡಾಧಿಕಾರಿ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.
ಎಜೆ ದಂತ ವಿದ್ಯಾಲಯದ ವೈದ್ಯರ ತಂಡ ಹಾಗು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಆದಂ ಹಾಗು ಡಾ| ಚಂದ್ರಕಾಂತ್, ರಾಜ್ಯಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್, ಕಾರ್ಯದರ್ಶಿ ಚಂದ್ರಶೇಖರ್, ಸಂಘದ ಸದಸ್ಯೆ ತ್ರೇಸಿಯ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಹಿ ಸಿಸ್ಟರ್, ಹಾಗು ತಾಲೂಕು ಆಸ್ಪತ್ರೆಯ ದಂತ ವೈಧ್ಯಾಧಿಕಾರಿ ಡಾ| ಅಝ್ಮಿಯ ಉಪಸ್ಥಿತಿಯಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.