ಫೆ. 4-6 ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ವಾರ್ಷಿಕ ಜಾತ್ರೆ

 ನಿಟ್ಟಡ್ಕ : ಬರ್ಕಜೆ ನಿಟ್ಟಡ್ಕ ವೇಣೂರು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಕಟೀಲಿನ ಪ್ರಧಾನ ಅರ್ಚಕರಾದ ಕೆ. ಲಕ್ಷ್ಮೀನಾರಾಯಣ ಅಸ್ರಣ್ಣರ ನೇತೃತ್ವದಲ್ಲಿ ಫೆ.4 ರಿಂದ ಫೆ.6ರ ವರೆಗೆ ಜಾತ್ರಾ ಮಹೋತ್ಸವ ಮತ್ತು ಮಹಾ ಚಂಡಿಕಾ ಯಾಗ ನಡೆಯಲಿದೆ. ಫೆ.4ರಂದು ರಾತ್ರಿ ವಾಸ್ತುಪೂಜೆ, ವಾಸ್ತುಹೋಮ, ದಿಕ್‌ಬಲಿ, ಫೆ.5ರಂದು ನಾಗಬನದಲ್ಲಿ ಶ್ರೀ ನಾಗದೇವರಿಗೆ ತಂಬಿಲ, ರಾತ್ರಿ ಚಂಡಿಕಾಹೋಮ, ಪಂಚಾಮೃತ ಅಭಿಷೇಕ, ಪಂಚವಿಂಶತಿ ಕಲಶ, ಪಲ್ಲ ಪೂಜೆ, ಅಧಿವಾಸ ಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ 4ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಜಾದೂ, ನಾಟಕ, ಫೆ. 6ರಂದು ಸಂಜೆ 5ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಗುಳಿಗ, ಮೈಯಂತಿ, ಮತ್ತು ಮಂತ್ರದೇವತೆ, ಸನ್ಯಾಸಿ ಗುಳಿಗ ದೈವಗಳ ಗಗ್ಗರ ಸೇವೆ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.