ಫೆ.12: ಮಲೆಬೆಟ್ಟು ದೇವಸ್ಥಾನದಲ್ಲಿ ಪ್ರತಿಷ್ಠಾ ದಿನಾಚರಣೆ-ಜಾತ್ರೆ

Advt_NewsUnder_1
Advt_NewsUnder_1
Advt_NewsUnder_1

  ಉಜಿರೆ : ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಮಲೆಬೆಟ್ಟು ಇಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೆ ಫೆ.12ರಂದು ಆಲಂಬಾಡಿ ವಾಸುದೇವ ತಂತ್ರಿಯವರ ಹಿರಿತನದಲ್ಲಿ ಆಲಂಪಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಆಡಳಿತ ಮೊಕ್ತೇಸರ ಯು.ವಿಜಯ ರಾಘವ ಪಡ್ವೆಟ್ನಾಯರ ಮಾರ್ಗದರ್ಶನದಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ, ತೋರಣ ಮುಹೂರ್ತ, ಗಣಪತಿ ಹೋಮ, ಕಲಶಪೂಜೆ ಮತ್ತು ಕಲಶಾಭಿಷೇಕ ಬಳಿಕ ಶಾಶ್ವತ ನಿತ್ಯ ಪೂಜಾ ಸೇವಾ ರಶೀದಿ ಬಿಡುಗಡೆ ನಡೆಯಲಿದೆ. ಅನಂತರ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ. ಸಂಜೆ ಕಾಲರಾತ್ರಿ ದೈವದ ಪರ್ವ, ಭಂಡಾರ ಆಗಮನ. ೬.೦೦ರಿಂದ ವಿವಿಧ ಭಜನಾ ಮಂಡಳಿಗಳಿಂದ ಭಜನೆ, ರಂಗ ಪೂಜೆ, ಪ್ರಸಾದ ವಿತರಣೆ ನಡೆಯಲಿದ್ದು, ರಾತ್ರಿ ೯.೦೦ರಿಂದ ಮಂಜೇಶ್ವರ ಜೋಡುಕಲ್ಲು ತುಳುವರೆ ಉಡಲ್ ಇವರಿಂದ ತುಳು ಹಾಸ್ಯನಾಟಕ ಮದ್ಮೆ ಒಂಜಿ ಆಂಡ್‌ಗೆತಾ. ರಾತ್ರಿ ಕಾಲರಾತ್ರಿ ನೇಮೋತ್ಸವ ನಡೆಯಲಿದೆ. ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಅಭಿಷೇಕ ಮತ್ತು ನಾಗಪರ್ವ ನಡೆಯಲಿದೆ. ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಅಭಿಷೇಕ ಮತ್ತು ನಾಗಪರ್ವ ನಡೆಯಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾಧಿಗಳು ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು, ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು, ಆಡಳಿತ ಮೊಕ್ತೇಸರರು, ಪ್ರಧಾನ ಅರ್ಚಕರು, ಭಜನಾ ಮಂಡಳಿಯ ಪದಾಧಿಕಾರಿಗಳು, ಊರವರು ವಿನಂತಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.