ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಸಮಾಜ ಘಾತುಕ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ: ಐ.ಜಿ. ಹರಿಶೇಖರನ್ ಎಚ್ಚರಿಕೆ

Advt_NewsUnder_1
Advt_NewsUnder_1
Advt_NewsUnder_1

harishekharan copy ಬೆಳ್ತಂಗಡಿ : ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಸಮಾಜಘಾತುಕ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಪಿ. ಹರಿಶೇಖರನ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಮಾಜಘಾತುಕ ವ್ಯಕ್ತಿಗಳು ಫೇಸ್ಬುಕ್, ಟ್ವಿಟರ್, ವಾಟ್ಸಾಪ್, ಇನ್ಸ್ಟಾಗ್ರಾಮ್, ವಿ-ಚಾಟ್, ಸ್ಕೈಪ್ ಇನ್ನಿತರ ಸಾಮಾಜಿಕ ಜಾಲತಾಣಗಳ (social media) ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುವಂತಹ ಸುಳ್ಳು ಸಂದೇಶಗಳನ್ನು ಬಿತ್ತರಿಸಿ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಕೆಲಸಗಳನ್ನು ಮಾಡುತ್ತಿರುವುದಾಗಿದೆ. ಈ ರೀತಿ ಸಾಮಾಜಿಕ ಜಾಲತಾಣಗಳು ಹಾಗೂ ಬರವಣಿಗೆಗಳ ಮುಖಾಂತರ ಸಂದೇಶಗಳನ್ನು ಕಳುಹಿಸುವುದು ಕಾನೂನಿನ ವಿರುದ್ಧವಾಗಿದ್ದು ಈ ಕುರಿತು ಐಪಿಸಿ, ಕಲಂ 153-3ರಲ್ಲಿ ಈ ರೀತಿ ನಿರ್ದೇಶನ ನೀಡಲಾಗಿದೆ.
ವಿವಿಧ ಗುಂಪುಗಳ ನಡುವೆ ಮತ, ಮೂಲವಂಶ, ಜನ್ಮಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ದ್ವೇಷವನ್ನು ಉಂಟು ಮಾಡುವುದು ಮತ್ತು ಸೌಹಾರ್ದತೆಗೆ ಬಾಧಕವಾಗುವ ಕೃತ್ಯಗಳನ್ನು ಮಾಡುವುದು ಮತ್ತು ಆಡಿದ ಮಾತುಗಳಿಂದ ಇಲ್ಲವೇ ಬರೆದ ಶಬ್ದಗಳಿಂದ ಅಥವಾ ಸಂಜ್ಞೆಗಳಿಂದ ಅಥವಾ ದೃಶ್ಯ ನಿರೂಪಣೆಗಳಿಂದ ಅಥವಾ ಬೇರೆ ರೀತಿಯಲ್ಲಿ ಮತ, ಮೂಲವಂಶ, ಜನ್ಮಸ್ಥಳ, ನಿವಾಸ, ಭಾಷೆ, ಜಾತಿ, ಕೋಮು ಅಥವಾ ಇತರ ಯಾವುದೇ ಆಧಾರದ ಮೇಲೆ ವಿವಿಧ ಮತೀಯ, ಮೂಲ ವಂಶೀಯ, ಭಾಷಿಕ ಅಥವಾ ಪ್ರಾದೇಶಿಕ ಗುಂಪುಗಳ ನಡುವೆ ಅಥವಾ ಕೋಮುಗಳ ನಡುವೆ ಅಸೌಹಾರ್ದವನ್ನು ಅಥವಾ ವೈರ, ದ್ವೇಷ ಅಥವಾ ವೈಮನಸ್ಯದ ಭಾವನೆಗಳನ್ನು ಹೆಚ್ಚಿಸಿದರೆ ಅಥವಾ ಹೆಚ್ಚಿಸಲು ಪ್ರಯತ್ನಿಸಿದರೆ ಅಥವಾ ವಿವಿಧ ಮತೀಯ, ಮೂಲ ವಂಶೀಯ, ಭಾಷಿಕ ಅಥವಾ ಪ್ರಾದೇಶಿಕ ಗುಂಪುಗಳ ನಡುವಣ ಅಥವಾ ಜಾತಿ ಅಥವಾ ಕೋಮುಗಳ ನಡುವಣ ಸೌಹಾರ್ದಕ್ಕೆ ಬಾಧಕವಾಗುವ ಯಾವುದೇ ಕೃತ್ಯವನ್ನು ಮಾಡಿದರೆ ಮತ್ತು ಅದರಿಂದ ಸಾರ್ವಜನಿಕ ನೆಮ್ಮದಿಯನ್ನು ಕದಡಿದರೆ ಅಥವಾ ಕದಡುವ ಸಂಭವವಿದ್ದರೆ, ಅಂತಹ ವ್ಯಕ್ತಿ 3 ವರ್ಷಗಳ ಅವಧಿಯವರೆಗಿನ ಕಾರಾಗೃಹ ವಾಸದಿಂದ ಅಥವಾ ಜುಲ್ಮಾನೆಯಿಂದ ಅಥವಾ ಎರಡ ರಿಂದಲೂ ದಂಡಿತನಾಗತಕ್ಕದ್ದು.
ಈ ಕುರಿತಂತೆ ಇನ್ನು ಮುಂದೆ ಫೇಸ್ಬುಕ್, ಟ್ವಿಟರ್, ವಾಟ್ಸಾಪ್, ಇನ್ಸ್ಟಾಗ್ರಾಮ್, ವಿ-ಚಾಟ್, ಸ್ಕೈಪ್ ಇನ್ನಿತರ ಸಾಮಾಜಿಕ ಜಾಲತಾಣಗಳ (social media) ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುವಂತಹ ಸುಳ್ಳು ಸಂದೇಶ ಗಳನ್ನು ಬಿತ್ತರಿಸಿ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಕೆಲಸಗಳನ್ನು ಮಾಡಿದರೆ ಐಪಿಸಿ ಕಲಂ 153(ಎ) ಹಾಗೂ ಕಲಂ 66(ಎ) ಐ.ಟಿ. ಕಾಯ್ದೆ ಪ್ರಕಾರ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಪಿ. ಹರಿಶೇಖರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.