ಅಂಚೆಕಛೇರಿಯಲ್ಲಿ ಪಾಸ್‌ಪೋರ್ಟ್ ಸೇವೆ

  ರಾಜ್ಯದಲ್ಲಿ ಈಗಾಗಲೇ ಮೈಸೂರಿನ ಪ್ರಧಾನ ಅಂಚೆ ಕಚೇರಿಯಲ್ಲಿ ಪಾಸ್‌ಪೋರ್ಟ್ ಸೇವೆಯನ್ನು ಒದಗಿಸಲಾಗುತ್ತಿದ್ದು, ಸದ್ಯವೇ ಇನ್ನೂ ನಾಲ್ಕು ನಗರಗಳ ಪ್ರಧಾನ ಅಂಚೆ ಕಛೇರಿಗಳಲ್ಲಿ ಈ ಸೇವೆ ಆರಂಭಗೊಳ್ಳಲಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಅಂಚೆ ಇಲಾಖೆ ವಿವಿಧ ರಾಜ್ಯಗಳಲ್ಲಿ ಪ್ರಧಾನ ಅಂಚೆ ಕಚೇರಿಗಳನ್ನು ಪಾಸ್‌ಪೋರ್ಟ್ ಸೇವಾ ಕೇಂದ್ರಗಳನ್ನಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದು, ಈಗಾಗಲೇ ಪ್ರಾಯೋಗಿಕವಾಗಿ 2 ಅಂಚೆಕಛೇರಿಗಳಲ್ಲಿ ಈ ಸೇವೆ ಆರಂಭಗೊಂಡಿದೆ. ಸದ್ಯವೇ ರಾಜ್ಯದ ಬೆಳಗಾವಿ, ದಾವಣಗೆರೆ, ಹಾಸನ ಮತ್ತು ಗುಲ್ಬರ್ಗಾ ಸೇರಿದಂತೆ ವಿವಿಧ ರಾಜ್ಯಗಳ ಇನ್ನೂ 56 ಪ್ರಧಾನ ಅಂಚೆ ಕಚೇರಿಗಳಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರಗಳನ್ನು ಆರಂಭಿಸಲು ವಿದೇಶಾಂಗ ವ್ಯವಹಾರಗಳ ಕಚೇರಿಯು ನಿರ್ಧರಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.