ಬೆಳ್ತಂಗಡಿ ತಾಲೂಕು ಕ್ರೀಡಾಂಗಣವನ್ನು ಉನ್ನತಿಕರಣಗೊಳಿಸಲು ಪರಿಶೀಲನೆ

kridanganaಬೆಳ್ತಂಗಡಿ ತಾಲೂಕು ಕ್ರೀಡಾಂಗಣವನ್ನು ಉನ್ನತಿಕರಣಗೊಳಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ಶಾಸಕ, ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷ ಕೆ ವಸಂತ ಬಂಗೇರ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಪತ್ರಕರ್ತರ ಸಂಘದ ಅಧ್ಯಕ್ಷ ದೇವಿಪ್ರಸಾದ್, ಗೇರು ಅಭಿವೃದ್ಧಿ ನಿಗಮದ ನಿರ್ದೇಶಕ ಚಂದು ಎಲ್, ಕಾಂಗ್ರೆಸ್ ಎಸ್ ಸಿ ಘಟಕದ ತಾಲೂಕು ಅಧ್ಯಕ್ಷ ಬಿ.ಕೆ ವಸಂತ್, ಯುವ ಕಾಂಗ್ರೆಸ್ ನಾಯಕ ಅಜಯ್ ಎ.ಜೆ, ಡಿಎಸ್‌ಎಸ್(ಅಂಬೇಡ್ಕರ್ ವಾದ) ತಾಲೂಕು ಸಮಿತಿ ಸದಸ್ಯ ಆನಂದ ನೆಲ್ಲಿಂಗೇರಿ, ದಲಿತ ಹಕ್ಕುಗಳ ಸಮಿತಿಯ ರಾಜ್ಯ ಸಮಿತಿ ಸದಸ್ಯ ಶೇಖರ್ ಎಲ್ ಉಪಸ್ಥಿತರಿದ್ದರು. ತಾಲೂಕು ಕ್ರೀಡಾಂಗಣ ಹಲವು ವರ್ಷಗಳಿಂದ ದುರಸ್ಥಿಯಲ್ಲಿದ್ದು, ಇದನ್ನು ಉನ್ನತ ಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಸರ್ಕಾರದ ಅನುದಾನಕ್ಕಾಗಿ ರಾಜ್ಯ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಚಿವ ಪ್ರಮೋದ್ ಮಧ್ವರಾಜ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಶಾಸಕರು ತಿಳಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.