ಕೊಲ್ಲಿ ದೇವಸ್ಥಾನ ರೂ.೩೨ಲಕ್ಷ ವೆಚ್ಚದ ನೂತನ ಕಟ್ಟಡಗಳ ಉದ್ಘಾಟನೆ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸರಕಾರದ ಅನುದಾನಕ್ಕೆ ಪ್ರಯತ್ನ : ಬಂಗೇರ

Advt_NewsUnder_1
Advt_NewsUnder_1
Advt_NewsUnder_1

3

ಮಿತ್ತಬಾಗಿಲು : ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನಕ್ಕೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇಲಾಖೆ ೨೦೧೫ರಲ್ಲಿ ಮಂಜೂರುಗೊಳಿಸಿದ ರೂ.೩೨ಲಕ್ಷ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾದ ಅನ್ನಪೂರ್ಣ ಭೋಜನಾ ಶಾಲೆ ಹಾಗೂ ಪಾಕಶಾಲೆ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ಮಾ.೨೯ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.
ಬೆಳ್ತಂಗಡಿ ಕ್ಷೇತ್ರದ ಶಾಸಕ ಕೆ. ವಸಂತ ಬಂಗೇರ ಅವರು ಭೋಜನಾ ಶಾಲಾ ಕಟ್ಟಡವನ್ನು ಉದ್ಘಾಟಿಸಿ, ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೊಲ್ಲಿ ದೇವಸ್ಥಾನ ವ್ಯಾಪ್ತಿಯಲ್ಲಿ ಬಡವರೇ ಅಧಿಕವಿದ್ದು, ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳಿಗೆ ಶಕ್ತಿ ಮೀರಿ ದೇಣಿಗೆಯನ್ನು ಕೊಡಲಿದ್ದಾರೆ. ಜೊತೆಗೆ ದೇವಸ್ಥಾನಕ್ಕೆ ಸರಕಾರದ ವತಿಯಿಂದ ಹೆಚ್ಚು ಅನುದಾನ ಒದಗಿಸಲು ಪ್ರಯತ್ನಿಸುತ್ತೇನೆ ಎಲ್ಲರೂ ಒಟ್ಟು ಸೇರಿ ಜೀರ್ಣೋದ್ದಾರ ಕಾರ್ಯ ನಡೆಯಲಿ ಎಂದರು. ದೇವರ ಮೇಲೆ ಭಯ, ಭಕ್ತಿ ಬೇಕು, ಮಕ್ಕಳಲ್ಲೂ ಈ ಭಾವನೆಯನ್ನು ಮೂಡಿಸಬೇಕು, ಭಕ್ತಿಯಿಂದ ದೇವರನ್ನು ಪೂಜಿಸಿದರೆ ದೇವರು ಎಂದಿಗೂ ನಮ್ಮ ಕೈಬಿಡುವುದಿಲ್ಲ ಎಂದು ತಿಳಿಸಿದರು.
ಹಿಂದೂ ಧಾರ್ಮಿಕ ಸಂಸ್ಥೆಗಳ ಜಿಲ್ಲಾ ಸಹಾಯಕ ಆಯುಕ್ತೆ ಶ್ರೀಮತಿ ಪ್ರಮೀಳಾ ಎಂ.ಕೆ. ಅವರು ಪಾಕ ಶಾಲೆಯನ್ನು ಉದ್ಘಾಟಿಸಿ ಮಾತನಾಡಿ, ಸರಕಾರ ದೇವಸ್ಥಾನಗಳಿಗೆ ನೀಡುವ ಅನುದಾನ ದುರುಪಯೋಗವಾಗದಂತೆ ವ್ಯವಸ್ಥಾಪನಾ ಸಮಿತಿ ನೋಡಿಕೊಂಡು ಉತ್ತಮ ಕೆಲಸಗಳನ್ನು ಮಾಡಬೇಕು. ಕೊಲ್ಲಿ ದೇವಸ್ಥಾನದಲ್ಲಿ ಇನ್ನೂ ಅನೇಕ ಸೌಲಭ್ಯಗಳ ಅಗತ್ಯವಿದ್ದು, ಇದಕ್ಕೆ ಇಲಾಖೆ ವತಿಯಿಂದ ಸಹಕಾರ ನೀಡುವುದಾಗಿ ಹೇಳಿದರು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ. ಭಿಡೆಯವರು ಕೊಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ದೇವಸ್ಥಾನದ ಜೀರ್ಣೋದ್ಧಾರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದಕ್ಕೆ ಸರಕಾರದಿಂದ ಹೆಚ್ಚಿನ ನೆರವು ದೊರೆಯಲಿ ಎಂದು ಹಾರೈಸಿದರು.
ಕಾರ್ಯಕ್ರಮಕ್ಕೆ ದೇವಸ್ಥಾನದ ಎದುರು ನಿರ್ಮಿಸಲಾದ ಹೈಮಾಸ್ಕ್ ಲೈಟನ್ನು ಶಾಸಕರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಬಿ.ಎಸ್. ಮುಕುಂದ ಸುವರ್ಣ, ಜಿ.ಪಂ. ಸದಸ್ಯೆ ಶ್ರೀಮತಿ ಸೌಮ್ಯಲತಾ ಜಯಂತ ಗೌಡ, ತಾ.ಪಂ. ಸದಸ್ಯ ಜಯರಾಮ ಎಂ.ಕೆ, ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ನಾರಾಯಣ ಕೆ. ಪಾಟಾಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೃಷ್ಣಪ್ಪ ಪೂಜಾರಿ, ಪೂವಪ್ಪ ಗೌಡ, ಸುರೇಶ್ ಪೂಜಾರಿ, ಅಣ್ಣಿಕುಲಾಲ್, ಪದ್ಮ ಎಂ.ಕೆ, ಸೇಸಮ್ಮ, ಉಮೇಶ್ವರಿ ಬೆಡಿಗುತ್ತು, ಅರ್ಚಕ ವೇ| ಶಂಕರನಾರಾಯಣ ತೋಡ್ತಿಲ್ಲಾಯ ಉಪಸ್ಥಿತರಿದ್ದರು.
ಈ ಸಂದರ್ಭ ಗುತ್ತಿಗೆದಾರ ಗಿರಿರಾಜ ಬಾರಿತ್ತಾಯರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಶಾಸಕ ವಸಂತ ಬಂಗೇರ ಸೇರಿದಂತೆ ಅತಿಥಿ-ಗಣ್ಯರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಮಂಜುನಾಥ ಕಾಮತ್ ಅಭಿನಂದನಾ ಭಾಷಣ ಮಾಡಿದರು.
ವಿಜಯಲಕ್ಷ್ಮೀ ಶೆಟ್ಟಿ ಪ್ರಾರ್ಥನೆ ಬಳಿಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಸ್ವಾಗತಿಸಿದರು. ಮೆನೇಜರ್ ಬಾಲಕೃಷ್ಣ ಪೂಜಾರಿ ಸನ್ಮಾನ ಪತ್ರ ವಾಚಿಸಿದರು. ಜೀರ್ಣೋದ್ಧಾರ ಸಮಿತಿ ಸಂಚಾಲಕ ಸಮಾಜ ಸೇವಕ ಕೇಶವ ವಿ. ಫಡಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.