ದೆಹಲಿಯಲ್ಲಿ ರಾಷ್ಟ್ರೀಯ ಆರ್‌ಸೆಟಿ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1

NACER 1

NACER 2

NACERದೇಶದ ರಾಜಧಾನಿ ದೆಹಲಿಯಲ್ಲಿ ಬುಧವಾರ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಆರ್‌ಸೆಟಿ ದಿನ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಆರ್‌ಸೆಟಿಗಳ ರಾಷ್ಟ್ರಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರುಡ್‌ಸೆಟ್‌ಗಳ ಸ್ಥಾಪನೆಯ ಉದ್ದೇಶ ಹಾಗೂ ಬೆಳವಣಿಗೆ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು. ಮುಂದಿನ ವರ್ಷಗಳಲ್ಲಿ ಇನ್ನೂ ಹೆಚ್ಚಿನ ಯುವಕ -ಯುವತಿಯರಿಗೆ ತರಬೇತಿ ನೀಡುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಆರ್‌ಸೆಟಿಗಳು ಶ್ರಮಿಸುತ್ತವೆ ಎಂದು ಹೆಗ್ಗಡೆಯವರು ಭರವಸೆ ನೀಡಿದರು.
ಭಾರತ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮಂತ್ರಾಲಯದ ಸಚಿವ ನರೇಂದ್ರ ಸಿಂಗ್ ಕೋಮರ್, ರಾಜ್ಯ ಸಚಿವ ರಾಮ್ ಕೃಪಾಲ್ ಯಾಧವ್ ಹಾಗೂ ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ರಾಜ್ಯ ಸಚಿವ ಸಂತೋಷ್ ಕುಮಾರ್ ಗ್ಯಾಂಗ್‌ವಾರ್‌ರವರು ಉಪಸ್ಥಿತರಿದ್ದು ಆರ್‌ಸೆಟಿಗಳು ಗ್ರಾಮೀಣ ಜನರಿಗೆ ನೀಡುತ್ತಿರುವ ತರಬೇತಿಯನ್ನು ಶ್ಲಾಘಿಸಿ ಈ ಸಂಸ್ಥೆಗಳಿಗೆ ಬೇಕಾದ ಸಹಾಯವನ್ನು ನೀಡುವ ಭರವಸೆ ನೀಡಿದರು.
ಸಮಾರಂಭದಲ್ಲಿ ಬ್ಯಾಂಕುಗಳ ಹಿರಿಯ ಅಧಿಕಾರಿಗಳು, ರಾಜ್ಯಗಳ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಆರ್‌ಸೆಟಿ ನಿರ್ದೇಶಕರುಗಳು ಭಾಗವಹಿಸಿದರು. ಈ ಸಂದರ್ಭದಲ್ಲಿ ಅತ್ಯುನ್ನತ ಸಾಧನೆ ಮಾಡಿದ ರಾಜ್ಯಗಳು, ಬ್ಯಾಂಕುಗಳು, ಆರ್‌ಸೆಟಿಗಳು ಹಾಗೂ ರಾಷ್ಟ್ರೀಯ ನಿರ್ದೇಶಕರು, ರಾಷ್ಟ್ರೀಯ ಆರ್‌ಸೆಟಿ ಶ್ರೇಷ್ಠತಾ ಕೇಂದ್ರ ಹಾಗೂ ರಾಷ್ಟ್ರೀಯ ರುಡ್‌ಸೆಟ್ ಅಕಾಡೆಮಿಯವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆರ್‌ಸೆಟಿ ಸಂಸ್ಥೆಗಳಿಂದ ತರಬೇತಿ ಪಡೆದು ಯಶಸ್ವಿ ಉದ್ಯಮವನ್ನು ನಡೆಸುತ್ತಿರುವ ಐದು ಜನ ಸಾಧಕರು ತಮ್ಮ ಅನುಭವವನ್ನು ಹಂಚಿಕೊಂಡರು. ಇವರಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು. ದೇಶದ ಎಲ್ಲಾ ರಾಜ್ಯಗಳಿಂದ ಬಂದ 1000ಕ್ಕೂ ಹೆಚ್ಚಿನ ಪ್ರತಿನಿಧಿಗಳು ಭಾಗವಹಿಸಿದ್ದರು.
NACER ಸಂಸ್ಥೆಯಿಂದ ಹೊರ ತಂದ ವಾರ್ಷಿಕ ವರದಿ 2016-17, ಯಶೋಗಾಥೆಗಳ ಸಂಕಲನವನ್ನು ಬಿಡುಗಡೆ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.