ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಸಾಧಕರಿಗೆ ಸನ್ಮಾನ

gowda 1

gowdaಬೆಳ್ತಂಗಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಜೂ. 11ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಜಿ. ಸೋಮೇ ಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಭಾಗವಹಿಸಿದ್ದರು. ಉಜಿರೆ ಶ್ರೀ.ಧ.ಮಂ. ಕಾಲೇಜು ಸಹಾಯಕ ಪ್ರಾಧ್ಯಾಪಕ ಡಾ. ದಿವ ಕೊಕ್ಕಡ ವಿಶೇಷ ಉಪನ್ಯಾಸ ನೀಡಿದರು. ಹಿರಿಯ ಯಕ್ಷಗಾನ ಕಲಾವಿದ ನಾರಾಯಣ ಗೌಡ ಕೊಳ್ತಿಗೆ ಹಾಗೂ ಡ್ರಾಮ ಜ್ಯೂನಿಯರ್‍ಸ್ ಖ್ಯಾತಿಯ ಬಾಲಪ್ರತಿಭೆ ಮಾಸ್ಟರ್ ತುಷಾರ್ ಗೌಡ ಪಯ್ಯೆ ಇವರಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಮೋಹನ್ ಕಲ್ಮಂಜ, ಧರ್ಣಪ್ಪ ಗೌಡ ಕೆಲ್ಲಗುತ್ತು, ದುಗ್ಗಪ್ಪ ಗೌಡ ಪೊಸಂದೋಡಿ, ಸವಿತಾ ಜಯದೇವ್, ಲೋಕೇಶ್ವರಿ ವಿನಯಚಂದ್ರ, ಸಂಘದ ಕಾರ್ಯದರ್ಶಿ ಮೋಹನ ಗೌಡ, ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.