ವೇಣೂರು ಸ.ಪ.ಪೂ. ಕಾಲೇಜಿನಲ್ಲಿ ಎಂಸಿಎಫ್ ವತಿಯಿಂದ ಶೌಚಾಲಯ ನಿರ್ಮಾಣ ಸಂಘ ಸಂಸ್ಥೆಗಳಿಗೂ ಸಾಮಾಜಿಕ ಜವಾಬ್ದಾರಿ ಇರಲಿ: ಪ್ರಭಾಕರ ರಾವ್

venur udhgataneವೇಣೂರು: ಸಂಘ ಸಂಸ್ಥೆಗಳಿಗೂ ಸಾಮಾಜಿಕ ಜವಾಬ್ದಾರಿ ಮುಖ್ಯ. ಈ ನಿಟ್ಟಿನಲ್ಲಿ ಎಂಸಿಎಫ್ ಆರೋಗ್ಯ ಶಿಬಿರಗಳ ಜೊತೆಗೆ ವಿವಿಧ ಕೊಡುಗೆಗಳನ್ನು ಅಕ್ಷರಪಾತ್ರ ಕಾರ್ಯಕ್ರಮದಡಿ ನೀಡುತ್ತಿದೆ. ನೈರ್ಮಲ್ಯಕ್ಕೂ ಆದ್ಯತೆ ನೀಡುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ಸಂಸ್ಥೆ ವತಿಯಿಂದ ಶೌಚಾಲಯಗಳ ನಿರ್ಮಾಣ ಮಾಡಲಾಗುತ್ತಿದೆ ಎಂದು ಮಂಗಳೂರು ಎಂಸಿಎಫ್ ಕಂಪೆನಿಯ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಭಾಕರ ರಾವ್ ಹೇಳಿದರು.
ಅವರು ವೇಣೂರು ಸ.ಪ.ಪೂ. ಕಾಲೇಜಿನಲ್ಲಿ ರೂ. 4 ಲಕ್ಷ ವೆಚ್ಚದಲ್ಲಿ ಎಂಸಿಎಫ್ ವತಿಯಿಂದ ನಿರ್ಮಾಣ ಮಾಡಲಾದ ಶೌಚಾಲಯದ ಕೀಯನ್ನು ಪ್ರಾಂಶುಪಾಲರಿಗೆ ಹಸ್ತಾಂತರಿಸಿ ಮಾತನಾಡಿದರು.
ಗ್ರಾಮೀಣ ಮಕ್ಕಳ ಕಾಳಜಿ ಎಂಸಿಎಫ್ ಸಂಸ್ಥೆಗೆ ಇದೆ. ಕಲಿಕೆಯಲ್ಲಿ ಮಕ್ಕಳು ಕೀಳರಿಮೆ ಇಟ್ಟುಕೊಳ್ಳದೆ ಛಲವಾದಿಗಳಾಗಿ ವಿದ್ಯಾರ್ಜನೆ ಮಾಡಿದಾಗ ಭವಿಷ್ಯ ಉತ್ತಮವಾಗಿ ರೂಪುಗೊಳ್ಳುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಗ್ರಾ.ಪಂ. ಅಧ್ಯಕ್ಷೆ ಮೋಹಿನಿ ವಿ. ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ನಾರಾವಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್ ಮಾತನಾಡಿ, ಶಿಕ್ಷಣದ ಜೊತೆಗೆ ಮಕ್ಕಳ ಮಧ್ಯೆ ಭಾವನಾತ್ಮಕ ಸಂಬಂಧವನ್ನು ಇಲ್ಲಿನ ಉಪನ್ಯಾಸಕರು ಬೆಳೆಸುತ್ತಿದ್ದಾರೆ. ಮೊಬೈಲ್, ಟಿವಿ ವೀಕ್ಷಣೆಯನ್ನು ನಿಯಂತ್ರಿಸಿ ವಿದ್ಯಾರ್ಜನೆಗೆ ಹೆಚ್ಚಿನ ಆಸಕ್ತಿ ನೀಡಿದಾಗ ಮಕ್ಕಳು ಮುಂದಿನ ಉತ್ತಮ ಪ್ರಜೆಗಳಾಗಿ ಬೆಳೆಯುತ್ತಾರೆ ಎಂದರು.
ಕಾಲೇಜಿನ ಪ್ರಭಾರ ಪ್ರಾಂಶುಪಾಲ ಚಂದ್ರು ಎಂ.ಎನ್. ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನ ಅಗತ್ಯತೆಯನ್ನು ಮನಗಂಡು ಎಂಸಿಎಫ್ ಶೌಚಾಲಯ ಕೊಡುಗೆ ನೀಡಿರುವುದಕ್ಕೆ ಸಂಸ್ಥೆಯನ್ನು ಅಭಿನಂದಿಸಿದರು. ಕಾಲೇಜಿನ ಸುರಕ್ಷತೆಯ ದೃಷ್ಟಿಯಿಂದ ಸಿಸಿಟಿವಿ ಹಾಗೂ ಕಂಪೌಂಡ್ ಗೋಡೆ ತುರ್ತಾಗಿ ರಚನೆಯಾಗಬೇಕಿದೆ. ಇದಕ್ಕಾಗಿ ಸಂಬಂಧಿತ ಜನಪ್ರತಿನಿಧಿಗಳಿಗೆ ಹಾಗೂ ಇಲಾಖೆಗೆ ಮನವಿ ನೀಡಲಾಗಿದೆ. ವಿದ್ಯಾರ್ಥಿಗಳ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳು ಸಹಕಾರ ನೀಡಬೇಕಾಗಿದೆ ಎಂದರು. ಎಂಸಿಎಫ್ ಸಂಸ್ಥೆಯ ಅಧಿಕಾರಿಗಳಾದ ರಾಘವೇಂದ್ರ, ಪಿ. ಸುರೇಶ್, ಡಾ| ಯೋಗೀಶ್, ಜಯರಾಮ ಕಾರಂದೂರು, ನಾಗೇಶ್ ಎಂ., ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪನ್ಯಾಸಕ ವೆಂಕಟೇಶ್ ಪಿ. ನಿರೂಪಿಸಿ ಉಪನ್ಯಾಸಕಿ ಸೆಲಿನಾ ಪಿ.ಜೆ. ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.